NationalPolitics

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿ.ಕೆ.ಶಿವಕುಮಾರ್

ನವದೆಹಲಿ; ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಕಗ್ಗಂಟಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಸಿಬಿಸಿ ಚರ್ಚೆಗಳು ನಡೆಯುತ್ತಿವೆ. ಸದ್ಯ, ಡಿ.ಕೆ.ಶಿವಕುಮಾರ್‌ ಅವರು ಮಲ್ಲಿಕಾರ್ಜುನ ನಿವಾಸಕ್ಕೆ ತೆರಳಿದ್ದಾರೆ. ಸಂಜೆ 5 ಗಂಟೆಗೆ ಖರ್ಗೆಯವರು ಡಿ.ಕೆ.ಶಿವಕುಮಾರ್‌ ಜೊತೆ ಮಾತಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ ಡಿ.ಕೆ.ಶಿವಕುಮಾರ್‌ ಅವರು ಕಳೆದ ಮೂರು ವರ್ಷಗಳಿಂದ ಪಕ್ಷ ಸಂಘಟನೆ, ಚುನಾವಣೆ ಸಮಯದಲ್ಲಿ ಬಿಡುವಿಲ್ಲದೆ ಓಡಾಡಿ ಪಕ್ಷದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರ ಬಗ್ಗೆ ಖರ್ಗೆಯವರಿಗೆ ಮನವರಿಕೆ ಮಾಡಿಕೊಡಲಿದ್ದಾರೆ. ತಮ್ಮ ಸ್ಪಷ್ಟ ನಿಲುವೇನು ಎಂಬುದನ್ನೂ ತಿಳಿಸಲಿದ್ದಾರೆ.

Share Post