ಪ್ಲೀಸ್ ಯಾರು ಸಿಎಂ, ಡಿಸಿಎಂ ವಿಚಾರ ಎತ್ತಬೇಡಿ; ಡಿ.ಕೆ. ಶಿವಕುಮಾರ್ .
ಬೆಂಗಳೂರು; ರಾಜ್ಯದಲ್ಲಿ ಕಷ್ಟಪಟ್ಟು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇವೆ. ಸಿಎಂ, ಡಿಸಿಎಂ ವಿಚಾರವಾಗಿ ಬಹಿರಂಗ ಚರ್ಚೆ ಮಾಡಿಸಿ ಪಕ್ಷಕ್ಕೆ ಮುಜುಗರ ತರಬೇಡಿ.. ನಿಮ್ಮ ಬಾಯಿಗೆ ಬೀಗ ಹಾಕದಿದ್ದರೆ ನೋಟೀಸ್ ಜಾರಿ ಮಾಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಶಾಸಕರು ಹಾಗೂ ಸಚಿವರು ಇತ್ತೀಚೆಗೆ ಈ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿದ್ದಾರೆ.. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಡಿಸಿಎಂ ಡಿ. ಕೆ. ಶಿವಕುಮಾರ್, ನನಗೆ ಯಾರ ಶಿಫಾರಸು ಬೇಕಿಲ್ಲ. ಆಶೀರ್ವಾದ ಇದ್ದಾರೆ ಸಾಕು ಎಂದು ಹೇಳಿದ್ದಾರೆ. ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ಡಿ. ಕೆ. ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಇದಕ್ಕೂ ಪ್ರತಿಕ್ರಿಯಿಸಿರುವ ಡಿಕೆ, ನೀವು ರಾಜಕಾರಣದ ಸುದ್ದಿಗೆ ಬರಬೇಡಿ ಎಂದು ಹೇಳಿದ್ದಾರೆ.
ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ನಾನು ಖರ್ಗೆ ಹಾಗೂ ಸಿದ್ದರಾಮಯ್ಯ ಕೂತು ಪಕ್ಷದ ಹಿತದೃಷ್ಟಿಯಿಂದ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಎಂಎಲ್ಎ ಕೂಡ ಮಾತಾಡುವ ಅವಶ್ಯಕತೆ ಇಲ್ಲ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.