Politics

ಆಡಳಿತ ಯಂತ್ರ ಕುಸಿದಿದೆ, ಸಿಎಂ ಬದಲಾಗ್ತಾರೆ ಅಂತ ಎಲ್ರೂ ಮಾತಾಡ್ತಿದ್ದಾರೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದಲ್ಲಿ ಯಾವ ಅಧಿಕಾರಿಯೂ ಮುಖ್ಯಮಂತ್ರಿ ಮಾತು ಕೇಳುತ್ತಿಲ್ಲ. ಸುವರ್ಣ ವಿಧಾನಸೌಧದ ಕಾರಿಡಾರ್‌ಗಳಲ್ಲೇ ಎಲ್ಲರೂ ಮುಖ್ಯಮಂತ್ರಿ ಬದಲಾಗ್ತಾರೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ಅವರು ಮುಖ್ಯಮಂತ್ರಿ ಸ್ಥಾನದಿಂದ ಬದಲಾಗುತ್ತಾರೆ. ಮುರುಗೇಶ ನಿರಾಣಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದರು. ಈ ಕಾರಣದಿಂದಾಗಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯಾಗುತ್ತೆ ಎಂದು ಹೇಳಲಾಗುತ್ತಿದೆ. ಇಂತಹ ಸಂದರ್ಭದಲ್ಲೇ ಸಿಎಂ ಬಸವರಾಜ ಬೊಮ್ಮಾಯಿಯವರು ತಮ್ಮ ಕ್ಷೇತ್ರದಲ್ಲಿ ಭಾವನಾತ್ಮಕವಾಗಿ ಮಾತನಾಡಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ಬಿಜೆಪಿಯವರು ಎಷ್ಟು ಮುಖ್ಯಮಂತ್ರಿಗಳನ್ನಾದರೂ ಬದಲಾಯಿಸಲಿ. ಯಡಿಯೂರಪ್ಪ ಅವರನ್ನು ಬೇಕಾದರೂ ಮತ್ತೆ ಸಿಎಂ ಸ್ಥಾನದಲ್ಲಿ ಕೂರಿಸಲಿ. ಅದಕ್ಕೆ ನನ್ನ ಯಾವ ಅಭ್ಯಂತರವೂ ಇಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

 

Share Post