ವೋಟ್ ಕೊಟ್ರೆ ನೀರು, ಹಕ್ಕುಪತ್ರ ಎಂದ ಡಿಕೆಶಿ; ಕೊತ್ವಾಲ್ ಬ್ರದರ್ ಗೂಂಡಾಗಿರಿ ಎಂದ ಬಿಜೆಪಿ!
ಬೆಂಗಳೂರು; ಲೋಕಸಭಾ ಮತದಾನದ ದಿನಾಂಕ ಹತ್ತಿರವಾಗುತ್ತಿದ್ದಂತೆ ನಾಯಕರ ವಾಕ್ಸಮರಗಳು ಜೋರಾಗುತ್ತಿವೆ.. ಅದರಲ್ಲೂ ಕೂಡಾ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಗ್ ಫೈಟ್ ನಡೆದಿದೆ.. ಡಿಕೆ ಬ್ರದರ್ಸ್ ಒಂದು ಕಡೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಮುಗಿಬಿದ್ದಿದ್ದಾರೆ.. ಇತ್ತ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಡಿಕೆ ಸಹೋದರರ ವಿರುದ್ಧ ಹರಿಹಾಯುತ್ತಿದ್ದಾರೆ.. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಪಾರ್ಟ್‌ಮೆಂಟ್ ಒಂದರ ನಿವಾಸಿಗಳಲ್ಲಿ ಮತಯಾಚನೆ ಮಾಡಿದ್ದು, ಈ ವೇಳೆ ಅಲ್ಲಿನ ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಆರೋಪ ಮಾಡುತ್ತಿದೆ.. ಈ ಸಂಬಂಧ ವಿಡಿಯೋ ಒಂದನ್ನು ಬಿಡುಗಡೆ ಮಾಡಲಾಗಿದೆ..
ಕಾಂಗ್ರೆಸ್‌ಗೆ ಮತ ಹಾಕಿದರೆ ಮಾತ್ರ ನಿಮಗೆ ನೀರು ಹಾಗೂ ಹಕ್ಕುಪತ್ರಗಳ ಸಿಗಲಿವೆ ಎಂದು ಡಿ.ಕೆ.ಶಿವಕುಮಾರ್ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ.. ಈ ಬಗ್ಗೆ ರಾಜ್ಯ ಬಿಜೆಪಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ..
ಬಿಜೆಪಿ ಟ್ವೀಟ್‌ನಲ್ಲೇನಿದೆ..?
==================
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊತ್ವಾಲ್ ಬ್ರದರ್ಸ್‌ಗಳ ಗೂಂಡಾಗಿರಿ ದಿನೇ ದಿನೇ ಹೆಚ್ಚಾಗುತ್ತಿದೆ. ನಿನ್ನೆ ರೈತನ ಹೊಲ ಸುಟ್ಟು, ರೈತನಿಗೆ ಗನ್ ಪಾಯಿಂಟ್ ಇಟ್ಟು ವಾತಾವರಣವನ್ನು ಭಯಭೀತಗೊಳಿಸಿದ್ದರು. ಇಂದು ಅಪಾರ್ಟ್ಮೆಂಟ್ ನಿವಾಸಿಗಳ ಸಭೆ ನಡೆಸಿ ನೀವು
@DKSureshINC ಗೆ ವೋಟು ಹಾಕಿಲ್ಲವೆಂದರೆ ನಿಮಗೆ ನೀರು ಕೊಡುವುದಿಲ್ಲ, ಹಕ್ಕು ಪತ್ರ ನೀಡುವುದಿಲ್ಲ ಎಂದು ನೇರವಾಗಿಯೇ ಡಿಸಿಎಂ @DKShivakumar ಅವರೇ ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ. ನಿಮ್ಮ ಈ ಗೊಡ್ಡು ಬೆದರಿಕೆಗಳಿಗೆ ಜನತೆ ಏಪ್ರಿಲ್ 26 ರಂದು ಅಂತಿಮ ಮೊಳೆ ಹೊಡೆಯುವುದು ಖಚಿತ -ನಿಶ್ಚಿತ-ಖಂಡಿತ.