ನಾಳೆ ತುರ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!; ಬದಲಾಗ್ತಾರಾ ಸಿಎಂ..?
ಬೆಂಗಳೂರು; ಮುಡಾ ವಿಚಾರದಲ್ಲಿ ರಾಜ್ಯಪಾಲರು ನೀಡಿರುವ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದಿದೆ.. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ.. ಈ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ..
ಒಂದು ಹೈಕಮಾಂಡ್ ನಾಯಕರು ರಾಜ್ಯದತ್ತ ಬರುತ್ತಿದ್ದಾರೆ.. ರಾತ್ರಿ ವೇಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಬೆಂಗಳೂರಿಗೆ ಬರಲಿದ್ದಾರೆ.. ಇನ್ನೊಂದೆಡೆ ಕಾನೂನು ತಜ್ಞರ ಜತೆ ಚರ್ಚಿಸುತ್ತಿರುವ ಸಿದ್ದರಾಮಯ್ಯ, ನಾಳೆ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.. ಈ ಸಭೆ ಯಾಕೆ ಕರೆಯಲಾಗಿದೆ..? ಸಚಿವರು ಶಾಸಕರ ಬೆಂಬಲ ಪಡೆಯುವುದಕ್ಕಾಗಿ ಅಥವಾ ನಾಯಕತ್ವ ಬದಲಾವಣೆ ಮಾಡೋದಕ್ಕಾಗಿ ಎಂಬುದರ ಬಗ್ಗೆ ಕುತೂಹಲ ಶುರುವಾಗಿದೆ..
ಸಿದ್ದರಾಮಯ್ಯ ಅವರು ಕಾನೂನಿಗೆ ಗೌರವ ಕೊಡುವವರು.. ಜೊತೆಗೆ ವಿಪಕ್ಷಗಳು ರಾಜೀನಾಮೆಗೆ ಒತ್ತಾಯಿಸುತ್ತಿವೆ.. ಇದರ ನಡುವೆ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು ಹೋರಾಟದ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.. ಹೀಗಿದ್ದರೂ ಕೂಡಾ ಮುಂದಿನ ಕಾನೂನು ಸಂಕಷ್ಟದ ವಿಚಾರವನ್ನು ಮನದಲ್ಲಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮುಂದಾಗ್ತಾರಾ ಎಂಬ ಅನುಮಾನ ಕೂಡಾ ಇದೆ..
ಹೈಕಮಾಂಡ್ ನಾಯಕರು ಕೂಡಾ ಬೆಂಗಳೂರಿಗೆ ಬರುತ್ತಿರುವುದರಿಂದ ನಾಳಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಏನು ಚರ್ಚೆ ನಡೆಯುತ್ತೆ ಅನ್ನೋದು ಕುತೂಹಲ ಕೆರಳಿಸಿದೆ..