Politics

ಲೋಕಸಭಾ ಚುನಾವಣೆ; ಇಂದಿನಿಂದ ಮೊದಲ ಹಂತದ ನಾಮಪತ್ರ ಸಲ್ಲಿಕೆ

ದೇಶದಲ್ಲಿ ಚುನಾವಣಾ ಕಾವು ಶುರುವಾಗಿದೆ..ಏಳು ಹಂತದ ಚುನಾವಣೆಯ ಮೊದಲ ಹಂತದ ಚುನಾವಣಾ ಅಧಿಸೂಚನೆ ಇಂದು ಹೊರಬೀಳಲಿದೆ.. ಮೊದಲ ಹಂತದ ಅಂಗವಾಗಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಎಲ್ಲಾ 39 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಇಂದಿನಿಂದ ನಾಮಪತ್ರ ಸ್ವೀಕಾರ ಆರಂಭವಾಗಲಿದೆ.

21 ರಾಜ್ಯಗಳಲ್ಲಿ ಮೊದಲ ಹಂತ;

ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಒಡಿಶಾ ವಿಧಾನಸಭೆಗಳ ಜತೆಗೆ ಲೋಕಸಭೆ ಚುನಾವಣೆ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ.. ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 19 ರಂದು ನಡೆಯಲಿರುವ ಮೊದಲ ಹಂತದ ಮತದಾನಕ್ಕೆ ಸಂಬಂಧಿಸಿದಂತೆ ಇಂದು ಅಧಿಸೂಚನೆ ಹೊರಬೀಳಲಿದೆ.. ಅದರೊಂದಿಗೆ ಇಂದಿನಿಂದ ನಾಮಪತ್ರ ಸ್ವೀಕಾರ ಆರಂಭ.. 27ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ.. 28ರಂದು ನಾಮಪತ್ರಗಳ ಪರಿಶೀಲನೆ .. ಹಿಂಪಡೆಯಲು 30 ಗಡುವು.. ಏಪ್ರಿಲ್ 19 ಮೊದಲ ಹಂತದ ಮತದಾನ, ಜೂನ್ 4 ಎಣಿಕೆ ನಡೆಯಲಿದೆ.

ಮೊದಲ ಹಂತದಲ್ಲಿ 102 ಸ್ಥಾನಕ್ಕೆ ಚುನಾವಣೆ;

ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಒಟ್ಟು 102 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಗರಿಷ್ಠ 39 ಲೋಕಸಭಾ ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ನಂತರ ರಾಜಸ್ಥಾನದ 25 ಲೋಕಸಭಾ ಸ್ಥಾನಗಳ ಪೈಕಿ ಮೊದಲ ಹಂತದಲ್ಲಿ 12 ಸ್ಥಾನಗಳಿಗೆ ಮತದಾನ ನಡೆಯಲಿದೆ. 80 ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಮೊದಲ ಹಂತದಲ್ಲಿ 8 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣೆ ನಡೆಯಲಿದೆ.

Share Post