Politics

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನ; ಸಚಿವ ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ!

ಬೆಂಗಳೂರು; ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದ ಹಿನ್ನೆಲೆಯಲ್ಲಿ ಸಿದ್ದರಾಮಯ ಸಂಪುಟದ ಮೊದಲ ವಿಕೆಟ್‌ ಪತನವಾಗಿದೆ.. ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರಿಗೆ ರಾಜೀನಾಮೆಗೆ ಸೂಚನೆ ನೀಡಲಾಗಿದೆ.. 

ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ಹೆಸರು ಕೇಳಿಬಂದಿತ್ತು.. ಈ ಹಿನ್ನೆಲೆಯಲ್ಲಿ ಸಚಿವರ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಒತ್ತಾಯ ಮಾಡಿದ್ದವು.. ಮುಜುಗರ ತಪ್ಪಿಸಿಕೊಳ್ಳುವ ಸಲುವಾಗಿ ಸಿಎಂ ಸಿದ್ದರಾಮಯ್ಯ ಅವರು ನಾಗೇಂದ್ರ ಅವರ ರಾಜೀನಾಮೆಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.. ಇಂದು ನಾಗೇಂದ್ರ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ..

ನಿನ್ನೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚರ್ಚೆ ಮಾಡಿದ್ದರು.. ಸರ್ಕಾರಕ್ಕೆ ಮುಖಭಂಗವಾಗಬಾರದೆಂಬ ಕಾರಣಕ್ಕೆ ನಾಗೇಂದ್ರ ರಾಜೀನಾಮೆ ನೀಡುವುದು ಒಳ್ಳೆಯದು..  ತನಿಖೆ ಪೂರ್ಣವಾದ ಬಳಿಕ ಮತ್ತೆ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳೋಣ ಎಂದು ತೀರ್ಮಾನಿಸಿದ್ದಾರೆ ಎನ್ನಲಾಗಿದೆ..

Share Post