NationalPolitics

ಅಮಿತ್‌ ಶಾ ಭೇಟಿಯಾದ ಮಾಜಿ ಸಚಿವ ವಿ.ಸೋಮಣ್ಣ; ತುಮಕೂರಲ್ಲಿ ಸ್ಪರ್ಧೆಗೆ ರೆಡಿನಾ..?

ನವದೆಹಲಿ; ಬಿಜೆಪಿ ನಾಯಕರ ಜೊತೆ ಮುನಿಸಿಕೊಂಡು ಕಾಂಗ್ರೆಸ್‌ಗೆ ಹಾರಲು ರೆಡಿಯಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ ಬಿಜೆಪಿಯಲ್ಲೇ ಉಳಿದುಕೊಳ್ಳುವ ಲಕ್ಷಣ ಕಾಣುತ್ತಿದೆ. ಯಾಕಂದ್ರೆ ನಾಲ್ಕು ದಿನ ಕಾದ ನಂತರ ಕೊನೆಗೂ ಅವರು ದೆಹಲಿಯಲ್ಲಿ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 

ಭೇಟಿ ವೇಳೆ ಸೋಮಣ್ಣ ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ. ಆದ್ರೆ ಅಮಿತ್‌ ಶಾ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಉಭಯ ನಾಯಕರು ಮಾತುಕತೆ ನಡೆಸಿದರೆಂದು ತಿಳಿದುಬಂದಿದೆ.

ಅಮಿತ್‌ ಶಾ ಭೇಟಿ ನಂತರ ಸೋಮಣ್ಣ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಹೈಕಮಾಂಡ್‌ ನಾಯಕರು ಪಕ್ಷದ ಮುಖ್ಯವಾಹಿನಿಯಲ್ಲಿರುವಂತೆ ಸೂಚನೆ ಕೊಟ್ಟಿದ್ದಾರೆ. ರಾಜ್ಯಸಭಾ ಸ್ಥಾನಕ್ಕೆ ಅವಕಾಶ ನೀಡುವಂತೆಯೂ ಮನವಿ ಮಾಡಿದ್ದೇನೆ. ಜೊತೆಗೆ ಮೂರು ಲೋಕಸಭಾ ಸ್ಥಾನಗಳನ್ನು ಗೆಲ್ಲಿಸಿಕೊಡುವ ಭರವಸೆಯನ್ನೂ ನೀಡಿದ್ದೇನೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣಗಳೇನು..? ಇದಕ್ಕೆ ಯಾರು ಕಾರಣ..? ರಾಜ್ಯ ರಾಜಕೀಯ ಬೆಳವಣಿಗೆಗಳೇನು ಎಂಬುದರ ಬಗ್ಗೆಯೂ ಚರ್ಚೆ ನಡೆದಿದೆ. ಈ ವಿಚಾರಗಳೇನು ಎಂದು ನಾನು ಬಹಿರಂಗ ಮಾಡೋದಿಲ್ಲ. ಶಾ ಅವರ ಭೇಟಿ ನನಗೆ ಸಮಾಧಾನ ತಂದಿದೆ ಎಂದು ಸೋಮಣ್ಣ ಹೇಳಿಕೊಂಡಿದ್ದಾರೆ.

 

Share Post