ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ
ಬೆಂಗಳೂರು; ವಿಧಾನಪರಿಷತ್ ಪದವೀಧರರ ಕ್ಷೇತ್ರದಿಂದ ಬಂಡಾಯವಾಗಿ ಸ್ಪರ್ಧೆ ಮಾಡಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.. ಪಕ್ಷದ ಸೂಚನೆ ಕಡೆಗಣಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ತನ್ನ ಆದೇಶದಲ್ಲಿ ತಿಳಿಸಿದೆ..
ಮಾಜಿ ಶಾಸಕ ರಘುಪತಿ ಭಟ್ ಅವರು ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿದ್ದರು.. ಆದ್ರೆ ಬಿಜೆಪಿ ಹೈಕಮಾಂಡ್ ಅವರಿಗೆ ಟಿಕೆಟ್ ನಿರಾಕರಿಸಿತ್ತು.. ಹೀಗಾಗಿ ಅವರು ಬಂಡಾಯವೆದ್ದಿದ್ದಾರೆ.. ಬಿಜೆಪಿ ಅಧಿಕೃತ ಅಭ್ಯರ್ಥಿಗೆ ವಿರುದ್ಧವಾಗಿ ಬಂಡಾಯವಾಗಿ ಸ್ಪರ್ಧೆ ಮಾಡಿದ್ದಾರೆ.. ಹೀಗಾಗಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದಾರೆ, ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ ಎಂದು ಪಕ್ಷದಿಂದ ಅವರನ್ನು ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ..
ತಕ್ಷದಿಂದ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದ್ದು, ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಮುಕ್ತಗೊಳಿಸಲಾಗಿದೆ..