Politics

ಗೋವಾ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಅಮಿತ್‌ ಪಾಲೇಕರ್‌

ಗೋವಾ: ನಿನ್ನೆಯಷ್ಟೇ ಪಂಜಾಬ್‌ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದ ಎಎಪಿ ನಾಯಕ ಅರವಿಂದ್‌ ಕೇಜ್ರಿವಾಲ್‌, ಇಂದು ಗೋವಾದಲ್ಲಿ ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಬಹಿರಂಗಪಡಿಸಿದ್ದಾರೆ.

ಅಮಿತ್‌ ಪಾಲೇಕರ್‌ ಅವರು ಆಮ್‌ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಅರವಿಂದ ಕೇಜ್ರಿವಾಲ್‌ ಇಂದು ಘೋಷಣೆ ಮಾಡಿದ್ದಾರೆ. ಕಳೆದ ಚುನಾವಣೆಯಲ್ಲಿ ಗೋವಾ ಎಎಪಿ ಉತ್ತಮ ಫೈಟ್‌ ನೀಡಿತ್ತು. ಈ ಬಾರಿ ಎಎಪಿ ಪಕ್ಷ ಪಂಜಾಬ್‌ ಹಾಗೂ ಉತ್ತರ ಪ್ರದೇಶದಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಪ್ರಬಲ ಫೈಟ್‌ ನೀಡಲು ತಯಾರಿ ನಡೆಸಿದೆ.

ಗೋವಾದಲ್ಲಿ ಒಟ್ಟು 40 ವಿಧಾನಸಭಾ ಕ್ಷೇತ್ರಗಳಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಎಎಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿದೆ. ಈಗಾಗಲೇ ಅಭ್ಯರ್ಥಿಗಳ ಪಟ್ಟಿಯೂ ಸಿದ್ಧವಾಗಿದೆ ಎಂದು ತಿಳಿದುಬಂದಿದೆ.

 

Amit Palekar will be AAP’s chief ministerial candidate for the Goa Assembly polls
40 seats
Share Post