Politics

GOA ELECTION: ಕಾಂಗ್ರೆಸ್‌ ಪರ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರ

ಗೋವಾ(GOA): ಪಂಚ ರಾಜ್ಯಗಳ ಚುನಾವಣಾ (Five states election) ಪ್ರಚಾರ ಅಬ್ಬರದಿಂದ ನಡೆಯುತ್ತಿದೆ. ಇತ್ತ ಗೋವಾದಲ್ಲೂ ಪ್ರಚಾರದ ಭಾರಾಟೆ ಜೋರಾಗಿದೆ. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ (siddaramaiah) ಗೋವಾದಲ್ಲಿ ಕಾಂಗ್ರೆಸ್‌ ಪರ ಪ್ರಚಾರಕ್ಕಿಳಿದಿದ್ದಾರೆ. ಇಂದಿನಿಂದ ಸಿದ್ದರಾಮಯ್ಯ ಗೋವಾದ ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಲಿದ್ದಾರೆ. ಸಿದ್ದರಾಮಯ್ಯ ಅವರಿಗೆ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಸೇರಿದಂತೆ ರಾಜ್ಯದ ಹಲವು ನಾಯಕರು ಸಾಥ್‌ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಅವರು ವಿಮಾನದಲ್ಲಿ ಇಂದು ಬೆಳಗ್ಗೆ ಗೋವಾಕ್ಕೆ ಬಂದಿಳಿದಿದ್ದಾರೆ. ಈ ವೇಳೆ ಗೋವಾದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಿದರು.

Share Post