ಲೈಂಗಿಕ ದೌರ್ಜನ್ಯ ಆರೋಪ – ಸಚಿವ ಮಿಲಿಂದ್ ನಾಯಕ್ ರಾಜೀನಾಮೆ
ಪಣಜಿ : ಗೋವಾ ನಗರಾಭಿವೃದ್ಧಿ ಸಚಿವ ಮತ್ತು ಬಿಜೆಪಿ ಶಾಸಕ ಮಿಲಿಂದ್ ನಾಯಕ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲೈಂಗಿಕ ಶೋಷಣೆ ಆರೋಪದ ಹಿನ್ನೆಲೆ ಮಿಲಿಂದ್ ರಾಜೀನಾಮೆ ಸಲ್ಲಿಸಿದ್ದಾರೆ.
ಬುಧವಾರ ತಡರಾತ್ರಿ ಈ ವಿಷಯ ಕುರಿತಂತೆ ಮುಖ್ಯಂತ್ರಿಗಳ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಮಿಲಿಂದ್ ನಾಯಕ್ ಅವರ ರಾಜೀನಾಮೆಯನ್ನು ಅಂಗೀಕರಿಸಿ ರಾಜ್ಯಪಾಲರಿಗೆ ಕಳುಹಿಸಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.