ಅನುದಾನಿತ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ; ನೇಮಕಾತಿಗೆ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು; ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ತುಂಬುವುದಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಮಯದಲ್ಲಿ ಕಲ್ಯಾಣ ಕರ್ನಾಟಕ ಹಾಗೂ ರೋಸ್ಟರ್ ಬಿಂದು ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸಬೇಕೆಂದೂ ಸೂಚನೆ ನೀಡಲಾಗಿದೆ.. ಇದರಿಂದ ಬಹುದಿನಗಳಿಂದ ಕಾಯುತ್ತಿದ್ದ ಅನುದಾನಿತ ಶಾಲೆಗಳ ಶಿಕ್ಷಕರಲ್ಲಿ ಆಸೆ ಚಿಗುರಿದೆ..
ಇದನ್ನೂ ಓದಿ; 13 ವರ್ಷದ ಹಿಂದೆ ಸತ್ತ ಗಂಡನಿಂದ ಮಗು ಪಡೆದಳಂತೆ ಈ ಮಹಿಳೆ!
ಅನುದಾನಿತ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ 2016ರಿಂದ 2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳ ಭರ್ತಿಗೆ ಈ ಆದೇಶ ನೀಡಲಾಗಿದೆ.. 1994-95ರ ಶೈಕ್ಷಣಿಕ ಅವಧಿಗೂ ಮುಂಚೆ ಶುರುವಾದ ಎಲ್ಲ ಅನುದಾನಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೂ ಬೋಧಕರ ನೇಮಕಾತಿಗೆ ಅನುಮತಿ ನೀಡಿ ಆದೇಶ ನೀಡಲಾಗಿದೆ.
ಇದನ್ನೂ ಓದಿ; ದರ್ಶನ್ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಪತ್ತೆ!