ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ!
ಬೆಂಗಳೂರು; ಮುಡಾ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.. ಇದರಿಂದಾಗಿ ಸಿಎಂ ಸಿದ್ದರಾಮಯ್ಯಗೆ ಕಾನೂನು ಸಂಕಷ್ಟ ಎದುರಾಗಿದೆ.. ಪ್ರಕರಣದಲ್ಲಿ ಸಿಎಂ ತನಿಖೆ ಎದುರಿಸಬೇಕಾದ ಅನಿವಾರ್ಯತೆ ಎದುರಾಗಿದೆ..
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರು ಖಾಸಗಿ ಮನವಿ ಸಲ್ಲಿಸಿದ್ದರು.. ಇದನ್ನು ಪರಿಗಣಿಸಿದ್ದ ರಾಜ್ಯಪಾಲರು, ಸಮಜಾಯಿಷಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು..
ಇದೀಗ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ.. ಸರ್ಕಾರ ಈಗ ರಾಜ್ಯಪಾಲರ ನಿರ್ಧಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಮುಂದಾಗಿದೆ..
ಮುಡಾದಲ್ಲಿ ಸಿಎಂ ಪತ್ನಿಯ ಹೆಸರಿನಲ್ಲಿದ್ದ ಜಮೀನನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಪತ್ನಿಗೆ ಮುಡಾದಿಂದ ಸೈಟುಗಳನ್ನು ನೀಡಲಾಗಿತ್ತು.. ಇದರಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.