Politics

ನಾವೂ 15 ಕ್ಷೇತ್ರ ಗೆಲ್ಲುತ್ತೇವೆ: ಕೆಪಿಸಿಸಿ ಮಾಜಿ ಅಧ್ಯಕ್ಷ ಜಿ.ಪರಮೇಶ್ವರ್

ತುಮಕೂರು: ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 15 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಕೊರಟಗೆರೆಯಲ್ಲಿ ಮತದಾನ ಮಾಡಿದ ನಂತರ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ವಿಧಾನಪರಿಷತ್‌ ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ರಾಜೇಂದ್ರ ರಾಜಣ್ಣ ಗೆಲ್ಲುವ ವಿಶ್ವಾಸ ನನಗಿದೆ. ಮೇಲ್ಮನೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ ಸಿಗಲಿದೆ ಎಂದು ಪರಮೇಶ್ವರ್‌ ವಿಶ್ವಾಸ ವ್ಯಕ್ತಪಡಿಸಿದರು.

Share Post