ಗುಜರಾತ್ ಸಿಎಂ ಆಗಿ ಇಂದು ಭೂಪೇಂದ್ರ ಪಟೇಲ್ ಪ್ರಮಾಣವಚನ
ಅಹಮದಾಬಾದ್; ಗುಜರಾತ್‌ನಲ್ಲಿ ಬಿಜೆಪಿ ಸತತ ಏಳನೇ ಬಾರಿ ಅಧಿಕಾರಕ್ಕೇರುತ್ತಿದ್ದು, ಇಂದು ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಸರ್ಕಾರವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಗಾಂಧಿನಗರದ ಹೆಲಿಪ್ಯಾಡ್ ಮೈದಾನದಲ್ಲಿ ಗುಜರಾತ್ ರಾಜ್ಯಪಾಲ ಆಚಾರ್ಯ ದೇವ್ರತ್ ಅವರು ಭೂಪೇಂದ್ರ ಪಟೇಲ್ ಗೆ ಪ್ರಮಾಣವಚನ ಭೋದಿಸಲಿದ್ದಾರೆ.
ಭೂಪೇಂದ್ರ ಪಟೇಲ್ ಅವರ ಜೊತೆ 20 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ 200ಕ್ಕೂ ಹೆಚ್ಚು ಸಾಧು ಸಂತರು ಹಾಜರಿರಲಿದ್ದಾರೆ ಎಂದು ತಿಳಿದುಬಂದಿದೆ.