Politics

ನನಗೆ ಸಚಿವಗಿರಿ ಬೇಡ, ಮೈಸೂರಿಗೆ ಒಂದು ಸ್ಥಾನ ಕೊಡಿ; ಎಚ್‌.ವಿಶ್ವನಾಥ್‌

ಮೈಸೂರು: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಆದ್ರೆ ಮೈಸೂರಿಗೆ ಒಂದು ಸಚಿವ ಸ್ಥಾನ ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಸಚಿವ ಸ್ಥಾನ ಕೇಳುವುದಿಲ್ಲ. ಆದ್ರೆ ಮೈಸೂರು ಜಿಲ್ಲೆಗೆ ಸಚಿವ ಸ್ಥಾನ ಕೊಟ್ಟಿಲ್ಲ. ಹೀಗಾಗಿ ಮೈಸೂರಿನ ಶಾಸಕರಿಗೆ ಒಂದು ಸಚಿವ ಸ್ಥಾನ ನೀಡಬೇಕು ಎಂದು ಶಾಸಕ ಎಸ್‌.ಎ.ರಾಮದಾಸ್‌ ಪರವಾಗಿ ಬ್ಯಾಟಿಂಗ್‌ ಮಾಡಿದ್ದಾರೆ.

 

Share Post