Politics

ವಾರಾಣಸಿಯಲ್ಲಿ ಪ್ರಿಯಾಂಕಾ ಸ್ಪರ್ಧಿಸಿದ್ದರೆ ಮೋದಿ 3 ಲಕ್ಷ ಮತಗಳಿಂದ ಸೋಲುತ್ತಿದ್ದರು; ರಾಹುಲ್‌ ಗಾಂಧಿ!

ರಾಯ್ ಬರೇಲಿ; ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೇವಲ ಒಂದೂವರೆ ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಒಂದು ವೇಳೆ ಅಲ್ಲಿ ನನ್ನ ಸಹೋದರಿ ಪ್ರಿಯಾಂಕಾ ಗಾಂಧಿ ಅಲ್ಲಿ ಸ್ಪರ್ಧೆ ಮಾಡಿದ್ದಿದ್ದರೆ ಮೋದಿಯವರನ್ನು ಮೂರು ಲಕ್ಷ ಮತಗಳ ಅಂತರದಿಂದ ಸೋಲಿಸುತ್ತಿದ್ದರು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.. ರಾಯ್ ಬರೇಲಿಯಲ್ಲಿ ನಡೆದ ಕೃತಜ್ಞತಾ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಪ್ರಿಯಾಂಕಾ ಸ್ಪರ್ಧೆ ಮಾಡಿದ್ದರೆ ಮೋದಿಯವರನ್ನು ಸೋಲಿಸಬಹುದಿತ್ತು ಎಂದು ಹೇಳಿದ್ದಾರೆ..

ಕಾಂಗ್ರೆಸ್‌ ಹಾಗೂ ನಮ್ಮ ಮಿತ್ರಪಕ್ಷಗಳು ಅಹಂಕಾರ ಪ್ರದರ್ಶಿಸುವುದಿಲ್ಲ.. ಬದಲಾಗಿ ನಾವು ಜನರ ಪರವಾಗಿ ಕೆಲಸ ಮಾಡುತ್ತೇವೆ.. ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಮೋದಿ ಅವರು ಸಾಮಾನ್ಯ ಜನರನ್ನು ಕಡೆಗಣಿಸಿದ್ದರು.. ಇದರಿಂದಾಗಿ ಅಯೋಧ್ಯೆಯಲ್ಲಿ ಜನರು ಬಿಜೆಪಿಯನ್ನು ಸೋಲಿಸಿದ್ದಾರೆ ಎಂದು ಹೇಳಿದ್ದಾರೆ..

 

Share Post