2023ರ ಚುನಾವಣೆಯಲ್ಲಿ ಕಾಂಗ್ರೆಸ್ಗೆ 80ಕ್ಕಿಂತ ಹೆಚ್ಚು ಸ್ಥಾನ ಸಿಗಲ್ಲ; ಹೆಚ್ಡಿಕೆ
ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 80ಕ್ಕೂ ಹೆಚ್ಚು ಸ್ಥಾನ ಗಳಿಸುವ ಸಾಮರ್ಥ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ಗೆ ಸ್ವಂತವಾಗಿ ಅಧಿಕಾರಕ್ಕೆ ಬರೋದಕ್ಕೆ ಸಾಧ್ಯವಿಲ್ಲ. ಅವರು ಬೇರೆ ಪಕ್ಷಗಳ ನಾಯಕರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಈ ಹಿಂದೆಯೂ ಬೇರೆ ಪಕ್ಷಗಳು ಮಾಡಿಕೊಂಡ ತಪ್ಪಿಗೆ ಕಾಂಗ್ರೆಸ್ಗೆ ಅಧಿಕಾರ ಸಿಕ್ಕಿತ್ತು. 1999ರಲ್ಲಿ ಜನತಾದಳ ವಿಭಜನೆಯಾಯಿತು. ಈ ಕಾರಣಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. 2013 ಬಿಜೆಪಿ ಮೂರು ಭಾಗವಾಗಿ ವಿಭಜನೆಯಾಗಿತ್ತು. ಹೀಗಾಗಿ, ಕಾಂಗ್ರೆಸ್ಗೆ ಅಧಿಕಾರ ಸಿಕ್ಕಿತು. ಅನಂತರ ಕಾಂಗ್ರೆಸ್ ಐದು ವರ್ಷ ಅಧಿಕಾರ ನಡೆಸಿದರೂ ಮುಂದಿನ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಲಾಗಲಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.