DistrictsPolitics

ಜಾತಿ ಗಣತಿಗೆ ನನ್ನ ವಿರೋಧವಿಲ್ಲ; ಅಚ್ಚರಿ ಮೂಡಿಸಿದ ಡಿಕೆಶಿ ಹೇಳಿಕೆ

ಬೆಳಗಾವಿ; ಜಾತಿ ಗಣತಿ ವಿರೋಧಿಸಿ ಒಕ್ಕಲಿಗರ ಸಂಘದಿಂದ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಈ ಪತ್ರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೂಡಾ ಸಹಿ ಹಾಕಿದ್ದರು. ಆದ್ರೆ ಇದೀಗ ಡಿ.ಕೆ.ಶಿವಕುಮಾರ್‌ ಅವರು ಜಾತಿ ಗಣತಿಗೆ ನನ್ನ ವಿರೋಧವಿಲ್ಲ ಎಂದು ಹೇಳಿದ್ದಾರೆ. 

ಬೆಳಗಾವಿಯಲ್ಲಿ ಮಾತನಾಡಿರುವ ಅವರು, ನಾನು ಜಾತಿ ಗಣತಿಗೆ ಯಾವತ್ತೂ ವಿರೋಧ ಮಾಡಿಲ್ಲ. ಅದು ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಆಸೆ ಎಂದು ಹೇಳಿದ್ದಾರೆ. ಈ ವಿಚಾರವಾಗಿ ರಾಜ್ಯ ಸಭೆಯಲ್ಲಿ ಮಾತನಾಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಲಿಷ್ಠ ಜಾತಿ ಜನರೆಲ್ಲಾ ಈ ವಿಚಾರದಲ್ಲಿ ಒಗ್ಗಟ್ಟಾಗಿದ್ದಾರೆ ಎಂದು ಹೇಳಿದ್ದರು.

ಕರ್ನಾಟಕದಲ್ಲಿ ಜಾತಿ ಗಣತಿ ಜಾರಿ ವಿಚಾರವಾಗಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ  ಎಂದು ಖರ್ಗೆ ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡುವಾಗ ಡಿ.ಕೆ.ಶಿವಕುಮಾರ್‌ ಮೇಲಿನಂತೆ ಹೇಳಿದ್ದಾರೆ.

 

Share Post