Politics

7ನೇ ವೇತನ ಆಯೋಗ ಶಿಫಾರಸು ಜಾರಿ; ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು; ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ.. ಏಳನೇ ವೇತನ ಆಯೋಗದ ಶಿಫಾರಸನ್ನು ಸರ್ಕಾರ ಅಧಿಕೃತವಾಗಿ ಜಾರಿ ಮಾಡಿದ್ದು, ಸದನದಲ್ಲಿ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ. ಜುಲೈ 1ಕ್ಕೆ ಪೂರ್ವಾನ್ವಯವಾಗುವಂತೆ ಆಗಸ್ಟ್‌ 1 ರಿಂದ ಹೊಸ ವೇತನ ಜಾರಿಯಾಗಲಿದೆ.

ಇದನ್ನೂ ಓದಿ; 7ನೇ ತರಗತಿ ಬಾಲಕಿ ಗ್ಯಾಸ್‌ ಡೆಲಿವರಿ ಬಾಯ್‌ ಮನೆಯಲ್ಲಿ ಅನುಮಾನಾಸ್ಪದ ಸಾವು!

ರಾಜ್ಯ ಸರ್ಕಾರಿ ನೌಕರರ ಮೂಲ ವೇತನಕ್ಕೆ 31ರಷ್ಟು ತುಟ್ಟಿ ಭತ್ಯೆ ಮತ್ತು ಶೇ. 27.50 ರಷ್ಟು ಫಿಟ್‌ಮೆಂಟ್ ಸೇರಿಸಿ ವೇತನ ಮತ್ತು ಪಿಂಚಣಿಯನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ, ರಾಜ್ಯ ಸರ್ಕಾರಿ ನೌಕರರ ಮೂಲ ವೇತನ ಹಾಗೂ ಪಿಂಚಣಿಯಲ್ಲಿ ಶೇ.58.50ರಷ್ಟು ಹೆಚ್ಚಳವಾಗಲಿದೆ. ಇದರ ಜೊತೆಗೆ ಎನ್‌ಆರ್‌ಎ ನಲ್ಲಿ ಶೇ. 32ರಷ್ಟು ಹೆಚ್ಚಳವಾಗುತ್ತದೆ. ಇದರ ಪ್ರಕಾರ ನೌಕರರ ಮೂಲ ವೇತನ 17 ಸಾವಿರ ಇದ್ದರೆ ಅದು 27ಸಾವಿರಕ್ಕೆ ಏರಿಕೆಯಾಗಲಿದೆ.

ಇದನ್ನೂ ಓದಿ; ಹೆಂಡತಿಯ ಈ ಮೂರು ಅಭ್ಯಾಸಗಳು ಗಂಡನಿಗೆ ಇಷ್ಟವಾಗೋದಿಲ್ಲವಂತೆ..!

Share Post