ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಕುಮಾರಸ್ವಾಮಿ
ಶಿವಮೊಗ್ಗ; ನಿನ್ನೆಯಷ್ಟೇ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆಯಾಗಲಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಇಂದು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.. ಶಿವಮೊಗ್ಗದಲ್ಲಿ ಮಾತನಾಡಿರುವ ಅವರು, ಹಾಸನ ಪೆನ್‌ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಪ್ರಜ್ವಲ್ ವಿರುದ್ಧ ಪಕ್ಷ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.. ಆದ್ರೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಮಾತ್ರ ತಿಳಿಸಿಲ್ಲ..
ಹಾಸನದಲ್ಲಿ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.. ಈ ಸಂಬಂಧ ಪೆನ್‌ಡ್ರೈವ್ ಗಳು ಹಾಸನ ಜಿಲ್ಲೆಯಾದ್ಯಂತ ಹರಿದಾಡುತ್ತಿವೆ.. ಜೊತೆಗೆ ಸರ್ಕಾರ ಕೂಡಾ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿದೆ.. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಕೂಡಾ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ..
ಶಿವಮೊಗ್ಗದಲ್ಲಿ ಮಾತನಾಡಿರುವ ಅವರು, ಯಾರೇ ಆಗಲಿ ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ.. ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಲೇಬೇಕಾಗುತ್ತದೆ.. ಸರ್ಕಾರ ಎಸ್‌ಐಟಿ ರಚನೆ ಮಾಡಿದೆ.. ತನಿಖೆಯಿಂದ ಸತ್ಯ ಹೊರಬರಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.. ಪ್ರಜ್ವಲ್ ಎಲ್ಲಿ ಹೋಗುತ್ತಾರೆ, ಏನು ಮಾಡುತ್ತಾರೆ ಎಂಬುದು ನನಗೆ ಹೇಗೆ ಗೊತ್ತಾಗುತ್ತದೆ.. ಚುನಾವಣೆಗೆ ಮೂರು ದಿನ ಮೊದಲು ಪೆನ್‌ಡ್ರೈವ್ ಬಿಡುಗಡೆ ಮಾಡಿ ಅಪಪ್ರಚಾರ ಮಾಡಲಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ..