Politics

ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ ಕಾಂಗ್ರೆಸ್‌; ಸುಪ್ರೀಂನಿಂದ ಬಿಗ್‌ ರಿಲೀಫ್‌!

ನವದೆಹಲಿ; ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್‌ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ಕಾಡಲು ಶುರು ಮಾಡಿತ್ತು.. ದಿನಕ್ಕೊಂದು ನೋಟಿಸ್‌ ಕಳುಹಿಸುತ್ತಿತ್ತು.. ಇದರಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್‌ ನಾಯಕರಿಗೆ ಸಾಕಷ್ಟು ಇರಿಸುಮುರಿಸಾಗಿತ್ತು.. ಆದ್ರೆ ಕಾಂಗ್ರೆಸ್‌ ನಾಯಕರಿಗೆ ಈಗ ರಿಲೀಫ್‌ ಸಿಕ್ಕಿದೆ.. ಆದಾಯ ತೆರಿಗೆ ಇಲಾಖೆ ನೀಡಿರುವ ನೋಟಿಸ್‌ ವಿಚಾರದಲ್ಲಿ ಯಾವುದೇ ಕ್ರಮ ಕೈಗೊಳ್ಳದಂತೆ  ಸುಪ್ರೀಂಕೋರ್ಟ್ ಮಹತ್ವದ ಸೂಚನೆ ಕೊಟ್ಟಿದೆ.

ಇದನ್ನೂ ಓದಿ; ಡಾ.ಕೆ.ಸುಧಾಕರ್‌ ಹೆಜ್ಜೆ ಇಟ್ಟಲ್ಲೆಲ್ಲಾ ಮುಳ್ಳು!; ಚಿಕ್ಕಬಳ್ಳಾಪುರದ ಅಗ್ನಿಪರೀಕ್ಷೆ ಗೆಲ್ತಾರಾ ಮಾಜಿ ಸಚಿವ..?

3500 ಕೋಟಿ ಆದಾಯ ತೆರಿಗೆ ಬಾಕಿ ಬಗ್ಗೆ ನೋಟಿಸ್‌;

ಕಾಂಗ್ರೆಸ್‌ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ನೋಟಿಸ್‌ ಕಳುಹಿಸಿತ್ತು.. ಕಾಂಗ್ರೆಸ್‌ ಪಕ್ಷ ಇದುವರೆಗೆ 3500 ಕೋಟಿ ರೂಪಾಯಿ ಆದಾಯ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಅದನ್ನ ಪಾವತಿ ಮಾಡುವಂತೆ ಕಳೆದ ಕೆಲ ದಿನಗಳಲ್ಲೇ ಎರಡು ಬಾರಿ ನೋಟಿಸ್‌ ನೀಡಲಾಗಿತ್ತು.. ಇದನ್ನು ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು.. ಇಂದು  ನ್ಯಾಯಮೂರ್ತಿ ಬಿವಿ ನಾಗರತ್ನ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ನೇತೃತ್ವದ ಉನ್ನತ ನ್ಯಾಯಾಲಯದ ಪೀಠ ಈ ಅರ್ಜಿಯ ವಿಚಾರಣೆ ನಡೆಸಿತು.

ಇದನ್ನೂ ಓದಿ; ಅಪ್ಪನಂತೆ ಕುದುರೆ ಸವಾರಿಗಿಳಿದ ನಟ ದರ್ಶನ್‌ ಮಗ ವಿನೀಶ್‌; ವಿಡಿಯೋ ವೈರಲ್‌

ಬಲವಂತದ ಕ್ರಮ ಇಲ್ಲ ಎಂದ ಐಟಿ ಇಲಾಖೆ;

ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಕಾಂಗ್ರೆಸ್ ಒಂದು ರಾಷ್ಟ್ರೀಯ ರಾಜಕೀಯ ಪಕ್ಷವಾಗಿದೆ. ಸದ್ಯ ದೇಶದಲ್ಲಿ ಚುನಾವಣೆಗಳು ನಡೆಯುತ್ತಿವೆ.. ಹೀಗಾಗಿ ನಾವು ಪಕ್ಷದ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳಿದರು. ಐಟಿ ಇಲಾಖೆ ಕೂಡಾ ಲೋಕಸಭೆ ಚುನಾವಣೆ ಮುಗಿಯುವವರೆಗೆ ಏನನ್ನೂ ವಸೂಲಿ ಮಾಡುವುದಿಲ್ಲ ಎಂದು ಹೇಳಿದರು. ಇದನ್ನು ಐಟಿ ಇಲಾಖೆಯೇ ಹೇಳಿರುವುದಾಗಿ ಕೋರ್ಟ್‌ಗೆ ತಿಳಿಸಿದರು.

ಇದನ್ನೂ ಓದಿ; ಬಿಸಿಲಲ್ಲಿ ನೀವು ಮಾಡುವ ಮಿಸ್ಟೇಕ್‌ ಕ್ಯಾನ್ಸರ್‌ಗೆ ಕಾರಣವಾಗುತ್ತೆ ಹುಷಾರ್‌!

ಎರಡು ನೋಟಿಸ್ ಕಳುಹಿಸಿದ್ದ ಐಟಿ ಇಲಾಖೆ;

ಮಾರ್ಚ್ 29 ರಂದು ಐಟಿ ಇಲಾಖೆಯಿಂದ 1,823 ಕೋಟಿ ರೂಪಾಯಿ ಆದಾಯ ತೆರಿಗೆ ಕಟ್ಟುವಂತೆ ನೋಟಿಸ್‌ ನೀಡಲಾಗಿತ್ತು..  ನಂತರ ಇನ್ನೊಂದು ನೋಟಿಸ್‌ ನೀಡಲಾಗಿದ್ದು. 2017-18 ರಿಂದ 2020-21 ರ ಮೌಲ್ಯಮಾಪನ ವರ್ಷಗಳಿಗೆ ದಂಡ ಮತ್ತು ಬಡ್ಡಿಯನ್ನು ಒಳಗೊಂಡಿರುತ್ತದೆ. ಇದು ಪಟ್ಟು 3500 ಕೋಟಿ ರೂಪಾಯಿ ಎಂದು ತಿಳಿಸಲಾಗಿತ್ತು. ಇದರ ವಿರುದ್ಧ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ಇದನ್ನೂ ಓದಿ; ವಿದ್ಯುತ್‌ ಬಳಕೆದಾರರಿಗೆ ಗುಡ್‌ ನ್ಯೂಸ್‌; ಇಂದಿನಿಂದ ದರ ಕಡಿತ!

 

Share Post