ಸಂಧಾನಕ್ಕೆ ಬಗ್ಗದ ಜಗದೀಶ್ ಶೆಟ್ಟರ್; ಪಕ್ಷಕ್ಕೂ, ಶಾಸಕತ್ವಕ್ಕೂ ರಾಜೀನಾಮೆ
ಧಾರವಾಡ; ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶಗೊಂಡಿದ್ದ ಜಗದೀಶ್ ಶೆಟ್ಟರ್ ಅವರ ಸಂಧಾನಕ್ಕೆ ಬಿಜೆಪಿ ನಾಯಕರು ಸಾಕಷ್ಟು ಪ್ರಯತ್ನಿಸಿದರೂ ಅವರು ಬಗ್ಗಿಲ್ಲ. ಹಲವು ಹುದ್ದೆಗಳ ಆಫರ್ ನೀಡಿದರೂ ಒಪ್ಪದ ಶೆಟ್ಟರ್ ಅವರು ಬಿಜೆಪಿ ಪಕ್ಷದಿಂದ ಹೊರಬರಲು ನಿರ್ಧರಿಸಿದ್ದಾರೆ. ಇಂದು ಅವರು ಶಾಸಕತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಕಳೆದ ರಾತ್ರಿ ಅಂತಿಮವಾಘಿ ಧರ್ಮೇಂದ್ರ ಪ್ರಧಾನ್ ಹಾಗೂ ಸಿಎಂ ಬೊಮ್ಮಾಯಿ, ಪ್ರಹ್ಲಾದ್ ಜೋಶಿಯವರು ಶೆಟ್ಟರ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ಶೆಟ್ಟರ್ ಸಂಧಾನಕ್ಕೆ ಟ್ರೈ ಮಾಡಿದರು. ಆದ್ರೆ ಇದಕ್ಕೆ ಶೆಟ್ಟರ್ ಒಪ್ಪಲಿಲ್ಲ. ಸಂಧಾನ ವಿಫಲವಾದ ನಂತರ ಶೆಟ್ಟರ್ ಅವರು ಬಿಜೆಪಿ ತೊರೆಯುತ್ತಿರುವುದಾಗಿ ಪ್ರಕಟಿಸಿದರು. 15 ದಿನಗಳ ಹಿಂದೆ ರಾಜಕೀಯ ನಿವೃತ್ತಿಯಾಗಬೇಕು ಎಂದು ಹೇಳಿದ್ದರೆ ನಾನು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಹೇಳುತ್ತಿದ್ದೆ. ಆದರೆ ಯಾವುದೇ ಮಾಹಿತಿ ನೀಡದೇ ಕೊನೆಯವರೆಗೆ ಸತಾಯಿಸಿದ್ದಾರೆ. ಈ ಕಾರಣಕ್ಕೆ ನಾನು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಹೇಳಿದರು.
ಇಂದು ಶಿರಸಿಗೆ ತೆರಳಲಿರುವ ಶೆಟ್ಟರ್ ಅವರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ನೀಡಲಿದ್ದಾರೆ. ನಂತರ ನನ್ನ ಹಿತೈಷಿಗಳ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲು ಶೆಟ್ಟರ್ ನಿರ್ಧರಿಸಿದ್ದಾರೆ.