Politics

Karnataka government; ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡುವಂತಿಲ್ಲ!

ಬೆಂಗಳೂರು; ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಒಂದು ಮಹತ್ವದ ಅಧಿಸೂಚನೆ ಹೊರಡಿಸಿದೆ. ಇನ್ಮೇಲೆ ರಾಜ್ಯದ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದೆಂದು ಎಲ್ಲಾ ಶಾಲಾ,ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. ಇದು ಸರ್ಕಾರದ ಅಧೀನ ಸಂಸ್ಥೆಯೇ ಆಗಿರುವುದರಿಂದ ಸರ್ಕಾರದ ಸೂಚನೆ ಮೇರೆಗೆ ಈ ಸುತ್ತೋಲೆ ಹೊರಡಿಸಲಾಗಿದೆ ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ; Joint Pain; ಕೀಲು ನೋವು ಕಾಡುತ್ತಿದೆಯಾ..?; ಹಾಗಾದ್ರೆ ಇಲ್ಲಿದೆ ಪರಿಹಾರ..!

ಸರ್ಕಾರ ನಿಗದಿ ಮಾಡಿರುವ ರಾಷ್ಟ್ರೀಯ ಹಬ್ಬಗಳು, ನಾಡಹಬ್ಬ ಹಾಗೂ ಜಯಂತಿಗಳನ್ನು ಮಾತ್ರ ಶಾಲೆ, ಕಾಲೇಜುಗಳನ್ನು ಆಚರಣೆ ಮಾಡಬೇಕು. ಇದನ್ನು ಹೊರತುಪಡಿಸಿ ಯಾವುದೇ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು ಎಂದು ಖಡಕ್ಕಾಗಿ ಸೂಚನೆ ನೀಡಲಾಗಿದೆ. ಅಂದರೆ ಯುಗಾದಿ, ಸಂಕ್ರಾಂತಿ, ಗಣೇಶ ಹಬ್ಬ, ರಂಜಾನ್, ಕ್ರಿಸ್ಮಸ್, ಈದ್ ಮಿಲಾದ್  ಮುಂತಾದ ಯಾವುದೇ ಧಾರ್ಮಿಕ ಹಬ್ಬಗಳನ್ನು ಶಾಲೆ ಮತ್ತು ಕಾಲೇಜುಗಳಲ್ಲಿ ಆಚರಿಸುವಂತಿಲ್ಲ.

ಸಮಾಜ ಕಲ್ಯಾಣ ಸಚಿವ ಹೆಚ್.​ಸಿ.ಮಹದೇವಪ್ಪ ಅವರ ಸೂಚನೆ ಹಿನ್ನೆಲೆಯಲ್ಲಿಯೇ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಈ ಸುತ್ತೋಲೆ ಹೊರಡಿಸಿದೆ ಎಂದು ತಿಳಿದುಬಂದಿದೆ.  ಸರ್ಕಾರದ 10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಶಾಲೆ, ಕಾಲೇಜುಗಳಲ್ಲಿ ಆಚರಿಸಬಹುದು. ಅವುಗಳನ್ನು ಧಾರ್ಮಿಕ ಹಬ್ಬ ಆಚರಿಸಿದರೆ ಪ್ರಾಂಶುಪಾಲರು ಹಾಗೂ ಶಾಲೆಯ ಇತರೆ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ; Election Bonds; ಚುನಾವಣಾ ಬಾಂಡ್‌ಗಳು ಅಸಂವಿಧಾನಿಕ; ಸುಪ್ರೀಂ ಮಹತ್ವದ ಆದೇಶ!

ಈ ಆದೇಶ ಯಾರ್ಯಾರಿ ಅನ್ವಯವಾಗುತ್ತದೆ..?

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಈ ಸುತ್ತೋಲೆ ಹೊರಡಿಸಿದೆ. ಹೀಗಾಗಿ ಈ ಸಂಘದ ಅಧೀನದಲ್ಲಿ ಬರುವ ವಸತಿ ಶಾಲೆ ಮತ್ತು ಕಾಲೇಜುಗಳಿಗೆ ಇದು ಅನ್ವಯವಾಗುತ್ತದೆ. ಹೀಗಾಗಿ ಖಾಸಗಿ ಶಾಲೆ ಹಾಗೂ ಕಾಲೇಜುಗಳಿಗೆ ಸುತ್ತೋಲೆ ಅನ್ವಯವಾಗಲ್ಲ. ಆದ್ರೆ ಬರೀ ವಸತಿ ಶಾಲೆಗಳಿಗೆ ಈ ಸುತ್ತೋಲೆ ಯಾಕೆ ಹೊರಡಿಸಿದರು ಅನ್ನೋದು ಗೊತ್ತಿಲ್ಲ.

ಸಂಘ ಹೊರಡಿಸಿರುವ ಸುತ್ತೋಲೆಯಲ್ಲಿ ಏನಿದೆ..?

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಣೆ ಮಾಡಬೇಕಾಗಿರುತ್ತದೆ. ಆದರೆ ಕೆಲವು ರಾಷ್ಟ್ರೀಯ ಹಬ್ಬಗಳಲ್ಲದೇ ಇತರೆ ಧಾರ್ಮಿಕ ಹಬ್ಬಗಳಾದ ಯುಗಾದಿ, ರಂಜಾನ್, ಕ್ರಿಸ್‌ಮಸ್, ಈದ್ ಮಿಲಾದ್, ಸಂಕ್ರಾಂತಿ ಇತರೆ ಹಬ್ಬಗಳನ್ನು ಆಚರಣೆ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಮಾನ್ಯ ಸಚಿವರು, ಸಮಾಜ ಕಲ್ಯಾಣ ಇಲಾಖೆ ಅವರು ಉಲ್ಲೇಖಿತ ಟಿಪ್ಪಣಿಯಲ್ಲಿ ಅನುಮೋದಿಸಿರುವಂತೆ ಸಂಘದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಈ ಕೆಳಕಂಡ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸಬೇಕು.

ಹೀಗಂತ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ;Are you angry..?; ನೀವು ಶತ ಕೋಪಿಷ್ಠರಾ..?; ಹಾಗಾದ್ರೆ ಇದನ್ನು ಓದಿ ಕೂಲ್‌ ಆಗಿ..!

ಯಾವೆಲ್ಲ ಹಬ್ಬಗಳನ್ನು ಆಚರಿಸಲು ಅವಕಾಶವಿದೆ..?

ಕನ್ನಡ ರಾಜ್ಯೋತ್ಸವ, ಗಣರಾಜ್ಯೋತ್ಸವ, ಸ್ವಾತಂತ್ರ ದಿನಾಚರಣೆ, ಮಹಾತ್ಮ ಗಾಂಧಿ ಜಯಂತಿ, ಡಾ.ಬಿ.ಆರ್. ಅಂಬೇಡ್ಕ‌ರ್ ಜಯಂತಿ, ವಾಲ್ಮೀಕಿ ಜಯಂತಿ, ಕನಕದಾಸ ಜಯಂತಿ, ಬಸವ ಜಯಂತಿ, ಸಂವಿಧಾನ ದಿನಾಚರಣೆ, ಯೋಗ ದಿನಾಚರಣೆ ಈ ಹತ್ತು ಜಯಂತಿಗಳನ್ನು ಮಾತ್ರ ಶಾಲೆಗಳಲ್ಲಿ ಆಚರಿಸಲು ಸೂಚನೆ ಕೊಡಲಾಗಿದೆ.

 

 

Share Post