ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಉಡುಪಿ- ದಕ್ಷಿಣ ಕನ್ನಡ ದ್ವಿಸದಸ್ಯ ಸ್ಥಾನದ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಗೆಲುವು. ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಅವರು ಕೂಡ ಗೆಲುವಿನ ನಗೆ ಬೀರಿದ್ದಾರೆ. ದಕ್ಷಿಣ ಕನ್ನಡದಲ್ಲಿ ಸಮಬಲದಲ್ಲಿ ಫಲಿತಾಂಶ ಬಂದಿದೆ.