NationalPolitics

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗುತ್ತಾ..?; ಬದಲಾದರೆ ಡಿಕೆಶಿಗೆ ಯಾವ ಹುದ್ದೆ..?

ಬೆಂಗಳೂರು; ನಿನ್ನೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೈಕಮಾಂಡ್‌ ನಾಯಕರನ್ನು ಭೇಟಿಯಾದಾಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.. ತೆಲಂಗಾಣದಲ್ಲೂ ಪಿಸಿಸಿ ಅಧ್ಯಕ್ಷರ ಬಗ್ಗೆ ಚರ್ಚೆ ನಡೆದಿದೆ.. ಈ ಬೆನ್ನಲ್ಲೇ ರಾಜ್ಯದಲ್ಲೂ ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.. ಡಿ.ಕೆ.ಶಿವಕುಮಾರ್‌ ಅವರೇ ಸದ್ಯದ ಕೆಪಿಸಿಸಿ ಅಧ್ಯಕ್ಷರಾಗಿದ್ದು, ಅವರನ್ನು ಬದಲಾಯಿಸಿದರೆ ಅವರಿಗೆ ಯಾವ ಹುದ್ದೆ ನೀಡಲಾಗುತ್ತೆ ಅನ್ನೋದು ಕುತೂಹಲ..

ಇದನ್ನೂ ಓದಿ; 2 ತಿಂಗಳ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಫಿಕ್ಸ್‌!?

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದಾಗ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದರು.. ಆದ್ರೆ ಹೈಕಮಾಂಡ್‌ ಡಿಸಿಎಂ ಸ್ಥಾನ ನೀಡಿತು.. ಹೀಗಾಗಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲೂ ನಾನೇ ಮುಂದುವರೆಯುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದರು.. ಈ ಹಿನ್ನೆಲೆಯಲ್ಲಿ ಎರಡೂ ಹುದ್ದೆಗಳಲ್ಲಿ ಡಿ.ಕೆ.ಶಿವಕುಮಾರ್‌ ಅವರನ್ನು ಮುಂದುವರೆಸಲಾಗಿತ್ತು.. ಆದ್ರೆ ಈಗ ಹಲವು ಹಿರಿಯ ನಾಯಕರು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬದಲಾಯಿಸುವಂತೆ ಬೇಡಿಕೆ ಇಟ್ಟಿದ್ದಾರೆ.. ಇತ್ತ ಈ ಬಗ್ಗೆ ಹೈಕಮಾಂಡ್‌ ಮಟ್ಟದಲ್ಲೂ ಚರ್ಚೆ ನಡೆದಿದೆ ಎನ್ನಲಾಗಿದೆ..

ಇದನ್ನೂ ಓದಿ; ಕೋರ್ಟ್‌ ವ್ಯತಿರಿಕ್ತ ತೀರ್ಪು ಕೊಟ್ಟರೆ ಮುಂದೇನು..?; ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದ್ದೇನು..?

ರಾಜ್ಯ ಸಚಿವ ಸಂಪುಟದಿಂದ 5-7 ಸಚಿವರನ್ನು ಕೈಬಿಡುವ ಬಗ್ಗೆ ಚರ್ಚೆ ನಡೆದಿದೆ.. ಇದರಲ್ಲಿ ಯಾರಿಗಾದರೂ ಒಬ್ಬರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.. ಆದ್ರೆ ಇದಕ್ಕೆ ಡಿ.ಕೆ.ಶಿವಕುಮಾರ್‌ ಅಭಿಪ್ರಾಯ ಏನು ಎಂಬುದು ಗೊತ್ತಾಗಿಲ್ಲ.. ಇನ್ನು ಒಂದು ವೇಳೆ ಸಿಎಂ ಬದಲಾದರೆ ಡಿ.ಕೆ.ಶಿವಕುಮಾರ್‌ ಅವರಿಗೆ ಆ ಸ್ಥಾನ ಸಿಗುತ್ತಾ ಎಂಬುದರ ಬಗ್ಗೆಯೂ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ..

Share Post