ಸಂಪುಟ ವಿಸ್ತರಣೆ ಅಗತ್ಯವಿದೆ ಎಂದ ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ರಾಜ್ಯ ಸರ್ಕಾರಕ್ಕೆ ಸದ್ಯದ ಪರಿಸ್ಥಿತಿಯಲ್ಲಿ ಸಂಪುಟ ವಿಸ್ತರಣೆ ಮಾಡುವ ಅವಶ್ಯಕತೆ ಇದೆ ಏಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ರಾಜ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಅಗತ್ಯತೆ ಇದೆ ಎಂಬುದು ಈಶ್ವರಪ್ಪ ಅವರ ವಾದ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯದ ನಾಯಕರು ತೀರ್ಮಾನ ತೆಗೆದುಕೊಳ್ಳಬೇಕು. ಅವರ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಈಶ್ವರಪ್ಪ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.