Politics

ಜನ ಬಲಕ್ಕೆ ಸೋಲು- ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌ ಹೀನಾಯ ಸೋಲು ಕಂಡಿದೆ. ಹಾಸನದಲ್ಲಿ ಸೂರಜ್‌ ರೇವಣ್ಣ ಹೊರತುಪಡಿಸಿ ಬೇರೆ ಯಾವ ಅಭ್ಯರ್ಥಿಯೂ ಗೆಲುವು ಸಾಧಿಸಿಲ್ಲ. ಅದರಲ್ಲೂ ಜೆಡಿಎಸ್‌ ಭದ್ರಕೋಟೆ ಎನಿಸಿರುವ ಮಂಡ್ಯದಲ್ಲಿ ಕೂಡ ದಳ ಪಕ್ಷದ ನಾಯಕರಿಗೆ ಮುಖಭಂಗ ಉಂಟಾಗಿದೆ.ಇನ್ನು ಫಲಿತಾಂಶ ಕುರಿತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಜಯಗಳಿಸಿದ ಎಲ್ಲ ಪಕ್ಷಗಳ ಅಭ್ಯರ್ಥಿಗಳಿಗೆ ನನ್ನ ಶುಭಾಶಯಗಳು. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಚುನಾವಣೆಯ ಮತದಾರರು. ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಶಕ್ತಿ ಏನೆಂದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಲ್ಲಿ ಜೆಡಿಎಸ್‌ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು ಎಂದರು.
ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ.ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ ಎಂದರು.

Share Post