Politics

ನಾಸೀರ್‌ ಹುಸೇನ್‌ಗೆ ಪ್ರಮಾಣವಚನ ಬೋಧಿಸದಂತೆ ನಿವೃತ್ತ ಅಧಿಕಾರಿಗಳ ಪತ್ರ

ಬೆಂಗಳೂರು; ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದಿಂದ ನಾಲ್ವರು ಆಯ್ಕೆಯಾಗಿದ್ದು, ಇದರಲ್ಲಿ ಮೂರು ಕಾಂಗ್ರೆಸ್‌ ಅಭ್ಯರ್ಥಿಗಳು ಗೆದ್ದಿದ್ದಾರೆ. ಈ ಮೂವರಲ್ಲಿ ಒಬ್ಬರಾದ ಕಾಂಗ್ರೆಸ್‌ನ ನಾಸೀರ್‌ ಹುಸೇನ್‌ ಅವರ ಬೆಂಬಲಿಗರು ಘೋಷಣೆ ಕೂಗುವಾಗ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದರು. ಈ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾಗಿರುವ ನಾಸೀರ್‌ ಹುಸೇನ್‌ ಅವರು ಪ್ರಮಾಣವಚನ ಬೋಧನೆ ಮಾಡಬಾರದು ಎಂದು ನಿವೃತ್ತ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು ಉಪರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

24 ನಿವೃತ್ತ ಅಧಿಕಾರಿಗಳಿಂದ ಉಪ ರಾಷ್ಟ್ರಪತಿಗೆ ಪತ್ರ;

24 ನಿವೃತ್ತ ಅಧಿಕಾರಿಗಳಿಂದ ಉಪ ರಾಷ್ಟ್ರಪತಿಗೆ ಪತ್ರ; ನಾಸೀರ್‌ ಹುಸೇನ್‌ ವಿಜಯೋತ್ಸವದ ಮೇಲೆ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿರುವುದು ಸಾಬೀತಾಗಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಹೀಗಾಗಿ ಪ್ರಕರಣದ ವಿಚಾರಣೆ ಪೂರ್ತಿಯಾಗುವವರೆಗೂ ನಾಸೀರ್‌ ಹುಸೇನ್‌ಗೆ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಬೋಧಸಬಾರದು ಎಂದು ಪತ್ರ ಬರೆಯಲಾಗಿದೆ. ಸುಮಾರು 24 ನಿವೃತ್ತಿ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳು, ಐಎಫ್‌ಎಸ್‌ ಹಾಗೂ ಐಆರ್‌ಎಸ್‌ ಅಧಿಕಾರಿಗಳು ಈ ಪತ್ರಕ್ಕೆ ಸಹಿ ಹಾಕಿದ್ದಾರೆ..

ಅಧಿಕಾರಿಗಳ ಪತ್ರ ಸ್ವಾಗತಿಸಿದ ಆರ್‌.ಅಶೋಕ್‌;

ಅಧಿಕಾರಿಗಳ ಪತ್ರ ಸ್ವಾಗತಿಸಿದ ಆರ್‌.ಅಶೋಕ್‌; ವಿಧಾನಸೌಧದಲ್ಲಿ ವಿಜಯೋತ್ಸವದ ಮೇಲೆ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಲಾಗಿತ್ತು. ಎಫ್‌ಎಸ್‌ಎಲ್‌ ವರದಿಯಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿವೃತ್ತ ಅಧಿಕಾರಿಗಳು ನಾಸೀರ್‌ ಹುಸೇನ್‌ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ಈ ನಿಲುವನ್ನು ವಿಪಕ್ಷ ನಾಯಕ ಆರ್‌.ಅಶೋಕ್‌ ಸ್ವಾಗತ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಆರ್‌.ಅಶೋಕ್‌ ಅವರು, ಮಾಜಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ನಿಲುವನ್ನು ನಾನು ಸ್ವಾಗತಿಸುತ್ತೇನೆ ಮತ್ತು ಪ್ರಶಂಸಿಸುತ್ತೇನೆ ಎಂದಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಸಯ್ಯದ್​ ನಾಸಿರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಪ್ರಕರಣ ತನಿಖೆ ಮುಗಿಯುವವರೆಗೂ ಪ್ರತಿಜ್ಞಾವಿಧಿ ಭೋದಿಸಬಾರದು ಎಂದು ಉಪ ರಾಷ್ಟ್ರಪತಿಗಳಿಗೆ ಹಿರಿಯ ನಿವೃತ್ತ ಅಧಿಕಾರಿಗಳು ಪತ್ರ ಬರೆದಿದ್ದಾರೆ. ದೇಶದ್ರೋಹಿಗಳಿಂದ ಸುತ್ತುವರೆಯಲ್ಪಟ್ಟಿದ್ದ ನಾಯಕ ಪ್ರಜಾಪ್ರಭುತ್ವದ ದೇವಾಲಯವಾದ ಸಂಸತ್ತಿಗೆ ಹೋಗಬಾರದು. ಅವರ ರಾಜೀನಾಮೆ ಪಡೆಯಬೇಕು. ಮರು ಚುನಾವಣೆ ನಡೆಯಬೇಕು ಎಂದು ಆರ್‌.ಅಶೋಕ್‌ ಆಗ್ರಹ ಮಾಡಿದ್ದಾರೆ.

ರಾಜಕೀಯ ಜಟಾಪಟಿಗೆ ಕಾರಣವಾಗಿರುವ ಪ್ರಕರಣ;

ರಾಜಕೀಯ ಜಟಾಪಟಿಗೆ ಕಾರಣವಾಗಿರುವ ಪ್ರಕರಣ; ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಲಾಗಿದೆ ಎಂದು ವಿಡಿಯೋವೊಂದು ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಆದ್ರೆ ಇದನ್ನು ತಿರುಚಲಾಗಿದೆ ಎಂದು ಕಾಂಗ್ರೆಸ್‌ನ ಕೆಲ ನಾಯಕರು ಹೇಳಿದ್ದರು. ನಾಸೀರ್‌ ಸಾಬ್‌ ಜಿಂದಾಬಾದ್‌ ಎಂದು ಕೂಗಲಾಗಿದೆ. ಅದನ್ನು ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಮಿಸ್‌ ಗೈಡ್‌ ಮಾಡಲಾಗುತ್ತಿದೆ ಕೆಲವರು ಆರೋಪಿಸಿದ್ದರು. ಆದ್ರೆ, ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿರುವುದು ಸ್ಪಷ್ಟವಾಗಿತ್ತು. ಇದೀಗ, ಬಿಜೆಪಿ ನಾಯಕರು ಕಾಂಗ್ರೆಸ್‌ ನಾಯಕರ ವಿರುದ್ಧ ಮುಗಿ ಬೀಳುತ್ತಿದ್ದಾರೆ.

Share Post