ಶುಕ್ರವಾರ ಬಿಜೆಪಿಯ ಉಳಿದ 5 ಕ್ಷೇತ್ರಗಳ ಪಟ್ಟಿ ರಿಲೀಸ್; ಯಾರು ಆ ಅಭ್ಯರ್ಥಿಗಳು..?
ನವದೆಹಲಿ; ಕಾಂಗ್ರೆಸ್ ಪಕ್ಷ ಇಂದು ತನ್ನ ಎರಡನೇ ಪಟ್ಟಿ ರಿಲೀಸ್ ಮಾಡೋದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.. ಇದರಲ್ಲಿ ರಾಜ್ಯದ 16 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.. ಇತ್ತ ರಾಜ್ಯದಲ್ಲಿ ಬಿಜೆಪಿಯಿಂದ ಐದು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಬೇಕಿದೆ.. ಅದಕ್ಕಾಗಿ ದೆಹಲಿಯಲ್ಲಿ ಬಿಸಿ ಬಿಸಿ ಚರ್ಚೆ ಆರಂಭವಾಗಿದೆ.. ಈಗಾಗಳೇ ಐದು ಕ್ಷೇತ್ರಗಳಿಗೆ ಬಹುತೇಕ ಟಿಕೆಟ್ ಅಂತಿಮ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.. ಆದ್ರೆ ಹೈಕಮಾಂಡ್ ಅಳೆದೂತೂಗಿ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿದೆ.. ಯಡಿಯೂರಪ್ಪ ಅವರು ನೀಡಿದ ಮಾಹಿತಿ ಪ್ರಕರಣ, ಶುಕ್ರವಾರ ಅಂದರೆ ಮಾರ್ಚ್ 22 ರಂದು ರಾಜ್ಯದ ಉಳಿದ ಐದು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಲಿದೆ.
ಇದನ್ನೂ ಓದಿ; ಪಕ್ಕದ ಮನೆ ದಂಪತಿ ಸರಸ ಸಲ್ಲಾಪ ನೋಡೋಕೆ ಆಗ್ತಿಲ್ಲ; ಬೆಂಗಳೂರು ಮಹಿಳೆಯಿಂದ ವಿಚಿತ್ರ ದೂರು
ಮಾರ್ಚ್ 22ಕ್ಕೆ 5 ಕ್ಷೇತ್ರಗಳ ಅಭ್ಯರ್ಥಿಗಳು ಪ್ರಕಟ;
ಮಾಜಿ ಸಿಎಂ ಯಡಿಯೂರಪ್ಪ ಅವರು ನಿನ್ನೆ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.. ಈ ವೇಳೆ ಐದು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡಿದ್ದಾರೆ.. ಇನ್ನು ಅಂತಿಮವಾಗಿ ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚೆ ಮಾಡಬೇಕಿದೆ.. ಜೆಪಿ ನಡ್ಡಾ ಜೊತೆಗೂ ಈ ಬಗ್ಗೆ ಚರ್ಚೆಯಾಗಿದೆ.. ಮೋದಿಯವರು ಗ್ರೀನ್ ಸಿಗ್ನಲ್ ಕೊಟ್ಟ ನಂತರ ಪಟ್ಟಿ ರಿಲೀಸ್ ಮಾಡಲಾಗುತ್ತದೆ.. ಹೀಗಾಗಿ ಮಾರ್ಚ್ 22ಕ್ಕೆ ಐದು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗುತ್ತೆ ಅಂತ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಅವರು, ಐದು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದೂ ಹೇಳಿದ್ದಾರೆ.
ಇದನ್ನೂ ಓದಿ; ಒಂದೇ ಕುಟುಂಬದ ಮೂವರು ನಿಗೂಢ ಸಾವು; ಸಾಲಗಾರರ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡ್ರಾ..?
ಯಾವ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಆಗಬೇಕಿದೆ..?
ಮೂಲಗಳ ಪ್ರಕಾರ ಜೆಡಿಎಸ್‌ಗೆ ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರಳನ್ನು ಬಿಟ್ಟುಕೊಡಲಾಗಿದೆ.. ಉಳಿದ 25 ಕ್ಷೇತ್ರಗಳು ಬಿಜೆಪಿ ಪಾಲಾಗಿವೆ.. ಇದರಲ್ಲಿ ಈಗಾಗಲೇ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದೆ.. ಇನ್ನೂ ಐದು ಕ್ಷೇತ್ರಗಳಾದ ಚಿತ್ರದುರ್ಗ, ಬೆಳಗಾವಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ ರಾಯಚೂರು ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಬೇಕಿದೆ.. ಈ ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ಇದ್ದದ್ದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲ ಉಂಟಾಗಿದ್ದು, ಇನ್ನೂ ಒಮ್ಮತದ ನಿರ್ಧಾರಕ್ಕೆ ಬರಲಾಗಿಲ್ಲ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ; ಮನೆಯಲ್ಲೇ ತಯಾರಿಸಬಹುದು ಪ್ರೊಟೀನ್ ಪೌಡರ್
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹಾಗೂ ಮಾಜಿ ಸಂಸದ ಜನಾರ್ದನಸ್ವಾಮಿ ನಡುವೆ ಫೈಟ್ ಇದೆ.. ಈ ಬಾರಿ ಜನಾರ್ದನಸ್ವಾಮಿಗೆ ಟಿಕೆಟ್ ಸಿಗಬಹುದು ಅಂತ ಹೇಳಲಾಗುತ್ತಿದೆ.. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಂಗಳಾ ಅಂಗಡಿ, ಮಹಾಂತೇಶ್ ಕವಟಗಿಮಠ, ರಮೇಶ್ ಕತ್ತಿ ಟಿಕೆಟ್ ಕೇಳುತ್ತಿದ್ದಾರೆ.. ಇದರಲ್ಲಿ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ಫೈನಲ್ ಆಗಿದೆ ಎಂದು ಹೇಳಲಾಗುತ್ತಿದೆ.. ಆದ್ರೆ ಇದಕ್ಕೆ ಹಲವರಿಂದ ವಿರೋಧ ವ್ಯಕ್ತವಾಗುತ್ತಿದೆ.. ಇನ್ನು ಉತ್ತರ ಕನ್ನಡದಲ್ಲಿ ಅನಂತ್‌ಕುಮಾರ್ ಹೆಗಡೆ, ಕಾಗೇರಿ, ಹರಿಪ್ರಕಾಶ್ ಕೋಣೆಮನೆ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.. ಅನಂತ್‌ಕುಮಾರ್ ಹೆಗಡೆ ಅವರಿಗೇ ಈ ಬಾರಿಯೂ ಟಿಕೆಟ್ ಸಿಗಬಹುದು ಎಂದು ಹೇಳಲಾಗುತ್ತಿದೆ.. ಇನ್ನು ಚಿಕ್ಕಬಳ್ಳಾಪುರದಲ್ಲಿ ಡಾ. ಕೆ. ಸುಧಾಕರ್ ಮತ್ತು ಅಲೋಕ್ ವಿಶ್ವನಾಥ್ ನಡುವೆ ಫೈಟ್ ಇದ್ದು, ಸುಧಾಕರ್‌ಗೆ ಟಿಕೆಟ್ ಆಗಿದೆ ಎಂದು ಹೇಳಲಾಗುತ್ತಿದೆ. ರಾಯಚೂರು ಕ್ಷೇತ್ರದಲ್ಲಿ ಹಾಲಿ ಸಂಸದ ರಾಜಾ ಅಮರೇಶ ನಾಯಕ್ ಮತ್ತು ಬಿ.ವಿ. ನಾಯಕ್ ನಡುವೆ ಫೈಟ್ ಇದೆ..
ಇದನ್ನೂ ಓದಿ; ಲೋಕಸಭಾ ಚುನಾವಣೆ; ಇಂದಿನಿಂದ ಮೊದಲ ಹಂತದ ನಾಮಪತ್ರ ಸಲ್ಲಿಕೆ
ಬಂಡಾಯ ಶಮನಕ್ಕೆ ನಾಯಕ ಪ್ರಯತ್ನ;
ಸುಮಾರು 9 ಕ್ಷೇತ್ರಗಳಲ್ಲಿ ಟಿಕೆಟ್ ವಂಚಿತರು ಅಸಮಾಧಾನಗೊಂಡಿದ್ದಾರೆ.. ಅವರನ್ನು ಸಮಾಧಾನಪಡಿಸುವ ಪ್ರಯತ್ನ ನಡೆಯುತ್ತಿದೆ.. ತುಮಕೂರಿನಲ್ಲಿ ಮಾಧುಸ್ವಾಮಿಯವರು ಅಸಮಾಧಾನಗೊಂಡಿದ್ದು, ಅವರ ಮನವೊಲಿಸಲಾಗಿದೆ ಎಂದು ಹೇಳಲಾಗುತ್ತಿದೆ.. ಈ ಬಗ್ಗೆ ಯಡಿಯೂರಪ್ಪ ಮಾತನಾಡಿದ್ದಾರೆ.. ಜೆ.ಸಿ.ಮಾಧುಸ್ವಾಮಿ ಸಹಕಾರದಿಂದ ನಾವು ಚುನಾವಣೆ ಗೆಲ್ಲಬೇಕಿದೆ ಎಂದಿದ್ದಾರೆ.. ಇನ್ನು ಕರಡಿ ಸಂಗಣ್ಣ ಅವರ ಜೊತೆಗೂ ಮಾತುಕತೆ ನಡೆಸಿದ್ದಾಗಿಯೂ ಅವರು ಹೇಳಿಕೊಂಡಿದ್ದಾರೆ. ಈಶ್ವರಪ್ಪ ಅವರನ್ನು ಹೈಕಮಾಂಡ್ ನಾಯಕರೇ ಮಾತನಾಡಿದ್ದಾರೆ. ಅವರು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ.. 2-3 ದಿನದಲ್ಲಿ ಅವರಿಗೆ ನಿಜ ಏನು ಎಂಬುದು ಅರ್ಥವಾಗಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಇದನ್ನೂ ಓದಿ; ವಿಜಯಪುರದ ಬಳಿ ಸುಮಾರು 3 ಕೋಟಿ ರೂ. ನಗದು ವಶ; ಎಲ್ಲಿಗೆ ಹೋಗುತ್ತಿತ್ತು ಗೊತ್ತಾ..?