Politics

Loksabha result; ಮಂಡ್ಯ ಹಾಗೂ ಕೋಲಾರದಲ್ಲಿ ಜೆಡಿಎಸ್‌ಗೆ ಭಾರೀ ಮುನ್ನಡೆ!

ಬೆಂಗಳೂರು; ರಾಜ್ಯದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಎರಡು ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ಸಾಧಿಸುತ್ತಿದೆ.. ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಬಹುತೇಕ ಜೆಡಿಎಸ್‌ ಅಭ್ಯರ್ಥಿಗಳು ಗೆಲುವು ಸಾಧಿಸುತ್ತೆ ಎಂದು ಹೇಳಲಾಗುತ್ತಿದೆ..

ಮಂಡ್ಯದಲ್ಲಿ ಕಾಂಗ್ರೆಸ್‌ನ ಸ್ಟಾರ್‌ ಚಂದ್ರು ವಿರುದ್ಧ ಹೆಚ್‌.ಡಿ.ಕುಮಾರಸ್ವಾಮಿಯವರು ಸುಮಾರು 20 ಸಾವಿರ ಮತಗಳ ಮುನ್ನಡೆಯಲ್ಲಿ ಸಾಗುತ್ತಿದ್ದಾರೆ.. ಶುರುವಿನಿಂದಲೂ ಕೂಡಾ ಕುಮಾರಸ್ವಾಮಿಯವರು ಮುನ್ನಡೆ ಕಾಯ್ದುಕೊಂಡಿದ್ದಾರೆ.. ಇನ್ನೊಂದೆಡೆ ಕೋಲಾರದಲ್ಲಿ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬು ಕೂಡಾ ಮೂರು ಸುತ್ತುಗಳಲ್ಲೂ ಮುನ್ನಡೆ ಸಾಧಿಸಿದ್ದಾರೆ.. ಅಲ್ಲೂ ಕೂಡಾ ಜೆಡಿಎಸ್‌ ಅಭ್ಯರ್ಥಿ ಸುಮಾರು 21 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ..

Share Post