ಲೋಕಸಭಾ ಚುನಾವಣೆ ಹಿನ್ನೆಲೆ; ರಾಜ್ಯ ಉಸ್ತುವಾರಿಗಳನ್ನು ನೇಮಕ ಮಾಡಿದ ಬಿಜೆಪಿ
ನವದೆಹಲಿ; ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಉಸ್ತುವಾರಿಗಳು ಹಾಗೂ ಸಹ ಉಸ್ತುವಾರಿಗಳನ್ನು ನೇಮಿಸಲಾಗಿದೆ. ಕರ್ನಾಟಕಕ್ಕೆ ಉಸ್ತುವಾರಿಯಾಗಿ ಸಂಸದ ರಾಧಾಮೋಹನ್ ದಾಸ್ ಅಗರ್ವಾಲ್ ಹಾಗೂ ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಬಿಹಾರಕ್ಕೆ ಬೈಜಯಂತ್ ಪಾಂಡಾ, ಬಿಹಾರಕ್ಕೆ ವಿನೋದ್ ತಾವ್ಡೆ ಉಸ್ತುವಾರಿಗಳಾಗಿ ನೇಮಕಗೊಂಡಿದ್ದಾರೆ. ಇನ್ನು ಒಡಿಶಾಕ್ಕೆ ವಿಜಯಪಾಲ್ ತೋಮರ್, ಹಿಮಾಚಲಕ್ಕೆ ಶ್ರೀಕಾಂತ್ ಶರ್ಮಾ ಅವರನ್ನು ನೇಮಿಸಲಾಗಿದೆ. ಇನ್ನುಳಿದಂತೆ ಅಂಡಮಾನ್ ಮತ್ತು ನಿಕೋಬಾರ್ಗೆ ವೈ ಸತ್ಯ ಕುಮಾರ್, ಅರುಣಾಚಲ ಪ್ರದೇಶಕ್ಕೆ ಅಶೋಕ್ ಸಿಂಘಾಲ್, ಚಂಡೀಗಢಕ್ಕೆ ವಿಜಯಭಾಯಿ ರೂಪಾನಿ, ಗೋವಾಕ್ಕೆ ಆಶಿಶ್ ಸೂದ್, ಜಾರ್ಖಂಡ್ಗೆ ಲಕ್ಷ್ಮೀಕಾಂತ ಬಾಜಪೇಯಿ, ಲಡಾಖ್ಗೆ ತರುಣ್ ಚುಗ್, ಲಕ್ಷ್ಯದ್ವೀಪಕ್ಕೆ ಅರವಿಂದ್ ಮೆನನ್, ಪುದುಚೇರಿಗೆ ನಿರ್ಮಲ್ ಕುಮಾರ್ ಸುರಾನಾ, ಸಿಕ್ಕಿಂಗೆ ದಿಲೀಪ್ ಜೈಸ್ವಾಲ್, ಉತ್ತರಾಖಂಡಕ್ಕೆ ದುಶ್ಯಂತ್ ಕುಮಾರ್ ಗೌತಮ್ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಬಿಹಾರಕ್ಕೆ ವಿನೋದ್ ತಾವ್ಡೆ, ಹರಿಯಾಣಕ್ಕೆ ಬಿಪ್ಲಬ್ ಕುಮಾರ್ ದೇವ್, ಹಿಮಾಚಲ ಪ್ರದೇಶಕ್ಕೆ ಶ್ರೀಕಾಂತ್ ಶರ್ಮಾ, ಮಧ್ಯಪ್ರದೇಶಕ್ಕೆ ಮಹೇಂದ್ರ ಕುಮಾರ್ ಸಿಂಗ್, ಒಡಿಶಾಕ್ಕೆ ವಿಜಯಪಾಲ್ ಸಿಂಗ್ ತೋಮರ್, ತಮಿಳುನಾಡಿಗೆ ಅರವಿಂದ್ ಮೆನನ್, ಪಶ್ಚಿಮ ಬಂಗಾಳಕ್ಕೆ ಮಂಗಲ್ ಪಾಂಡೆ ಇವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.