BengaluruPolitics

ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ; ಡಿಕೆಶಿ ಅಚ್ಚರಿ ಹೇಳಿಕೆ

ಬೆಂಗಳೂರು; ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಬಂದರೆ ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ನಿನ್ನೆ ಹಾಸನದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು. ಈ ಬೆನ್ನಲ್ಲೇ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೂಡಾ ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಿ.ಕೆ.ಶಿವಕುಮಾರ್‌ ಅವರು, ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಚುನಾವಣೆ ನಡೆಯುತ್ತದೆ. ಅದರಲ್ಲಿ ಯಾವ ಅನುಮಾನವೂ ಬೇಡ ಎಂದಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಇದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷನಿದ್ದೇನೆ. ನಾವಿಬ್ಬರೂ ಒಟ್ಟಿಗೆ ಚುನಾವಣೆ ಮಾಡುತ್ತೇವೆ. ಆದ್ರೆ ನಾಯಕತ್ವ ಅವರದ್ದೇ ಇರುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಹೇಳಿಕೆ ಎಲ್ಲರ ಅಚ್ಚರಿಗೆ ಕಾರಣವಾಗಿದೆ.

 

 

Share Post