Loksabha; ಡಿ.ಕೆ.ಸುರೇಶ್ ವಿರುದ್ಧ ಡಾ.ಸಿ.ಎನ್.ಮಂಜುನಾಥ್ ಸ್ಪರ್ಧೆ ಫಿಕ್ಸ್!
ಬೆಂಗಳೂರು; ಜಯದೇವ ಹೃದ್ರೋಗ ಸಂಸ್ಥೆ ಮಾಜಿ ನಿರ್ದೇಶಕ ಹಾಗೂ ದೇವೇಗೌಡರ ಅಳಿಯ ಡಾ.ಸಿ.ಎನ್.ಮಂಜುನಾಥ್ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಕಾಂಗ್ರೆಸ್‌ನ ಡಿ.ಕೆ.ಸುರೇಶ್ ವಿರುದ್ಧ ಅಖಾಡಕ್ಕಿಳಿಯೋದು ಬಹುತೇಕ ಫಿಕ್ಸ್ ಆಗಿದೆ. ಬಿಜೆಪಿಯಿಂದ ಟಿಕೆಟ್ ಕನ್ಫರ್ಮ್ ಮಾಡೋದು ಒಂದೇ ಬಾಕಿ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ; Rahul Gandhi; ತೆಲಂಗಾಣದ ಖಮ್ಮಂನಿಂದ ರಾಹುಲ್ ಗಾಂಧಿ ಸ್ಫರ್ಧೆ ಬಹುತೇಕ ಫಿಕ್ಸ್!
ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಚರ್ಚೆ;
ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಚರ್ಚೆ; ಮಂಗಳವಾರ ಮಾಜಿ ಸಿಎಂ ಕುಮಾರಸ್ವಾಮಿ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಭೆ ನಡೆದಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿವೆ. ಈ ನಡುವೆ ಬಿಜೆಪಿ ನಾಯಕರೇ ಡಾ.ಸಿ.ಎನ್.ಮಂಜುನಾಥ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ ಎಂದು ಹೇಳಿದ್ದಾರಂತೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಅಂತಿಮ ಹಂತದ ಮಾತುಕತೆ ನಡೆದಿದೆ. ಮೊದಲಿಗೆ ಸಿ.ಎನ್.ಮಂಜುನಾಥ್ ಅವರು ರಾಜಕೀಯಕ್ಕೆ ಬರೋದಕ್ಕೆ ಹಿಂದೇಟು ಹಾಕಿದ್ದರು. ಇದೀಗ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಯಲ್ಲಿ ಅವರ ಹೆಸರು ಬಹುತೇಕ ಅಂತಿಮ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ; ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರಿಗೆ ಬಾಂಬ್ ಬೆದರಿಕೆ; ಇ-ಮೇಲ್ ರವಾನೆ
ಸಿ.ಪಿ.ಯೋಗೇಶ್ವರ್ ಕೂಡಾ ಮಂಜುನಾಥ್ ಸ್ಪರ್ಧೆಗೆ ಒಪ್ಪಿಗೆ;
ಸಿ.ಪಿ.ಯೋಗೇಶ್ವರ್ ಕೂಡಾ ಮಂಜುನಾಥ್ ಸ್ಪರ್ಧೆಗೆ ಒಪ್ಪಿಗೆ; ಮಂಜುನಾಥ್ ಸ್ಪರ್ಧೆ ವಿಚಾರವಾಗಿಯೇ ಕುಮಾರಸ್ವಾಮಿ ನಿವಾಸದಲ್ಲಿ ಹೆಚ್ಚಿನ ಚರ್ಚೆ ನಡೆದಿದೆ. ಸಭೆಯಲ್ಲಿ ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಮುನಿರತ್ನ, ನಿಖಿಲ್ ಕುಮಾರಸ್ವಾಮಿ ಹೇಳಿ ಹಲವರು ಹಾಜರಿದ್ದರು. ಅಂದಹಾಗೆ ಸಿ.ಪಿ,ಯೋಗೇಶ್ವರ್ ಅವರು ಕೂಡಾ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದರು. ಆದ್ರೆ ಅವರು ಕೂಡಾ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಟಿಕೆಟ್ ನೀಡಿದರೆ ಒಳ್ಳೆಯದು. ನಾನು ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ; ಮಕ್ಕಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಾದ; ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ಸಲಹೆ
ಬಿಜೆಪಿ ನಾಯಕರಿಂದಲೇ ಮಂಜುನಾಥ್ ಹೆಸರು ಪ್ರಸ್ತಾಪ;
ಬಿಜೆಪಿ ನಾಯಕರಿಂದಲೇ ಮಂಜುನಾಥ್ ಹೆಸರು ಪ್ರಸ್ತಾಪ; ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ನಾಯಕರು, ಅದರಲ್ಲೂ ಆರ್‌ಆರ್ ನಗರ ಶಾಸಕ ಮುನಿರತ್ನ ಸೇರಿದಂತೆ ಹಲವು ಮಂಜುನಾಥ್ ಅವರ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ.. ಬಹುತೇಕರು ಮಂಜುನಾಥ್ ಅವರೇ ಸ್ಪರ್ಧೆ ಮಾಡಲಿ ಎಂದು ಹೇಳಿದ್ದಾರೆ.. ಈ ಹಿನ್ನೆಲೆಯಲ್ಲಿ ಸಿ.ಪಿ.ಯೋಗೇಶ್ವರ್ ಅವರು ಕೂಡಾ ಧ್ವನಿಗೂಡಿಸಿದ್ದು, ಡಾ.ಸಿ.ಎನ್.ಮಂಜುನಾಥ್ ಅವರಿಗೇ ಟಿಕೆಟ್ ನೀಡುವಂತೆ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಇದರ ನಡುವೆಯೂ ಮತ್ತೊಮ್ಮೆ ಕನ್ಫರ್ಮ್ ಮಾಡಿಕೊಳ್ಳಲು ಕುಮಾರಸ್ವಾಮಿಯವರು ಬಿಜೆಪಿಯ ಪ್ರತಿಯೊಬ್ಬರ ಬಳಿಯ ಪ್ರತ್ಯೇಕವಾಗಿ ಮಾತುಕತೆ ನಡೆಸಿ, ಅಭಿಪ್ರಾಯ ಸಂಗ್ರಹಿಸಿದ್ದಾರೆ. ಎಲ್ಲರೂ ಡಾ.ಸಿ.ಎನ್.ಮಂಜುನಾಥ್ ಸ್ಪರ್ಧೆಗೆ ಅಸ್ತು ಎಂದಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ; ಉಚಿತ ಆಸ್ಪತ್ರೆ ಕಟ್ಟಿಸಲು 12 ಎಕರೆ ಭೂಮಿ ಖರೀದಿಸಿದ ರಜಿನಿಕಾಂತ್!
ಖುದ್ದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರೇ ಡಾ.ಸಿ.ಎನ್. ಮಂಜುನಾಥ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಒಲವು ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಲೋಕಸಭಾ ಕ್ಷೇತ್ರ ಈ ಭಾರಿ ರಣರಂಗಕ್ಕೆ ಕಾರಣವಾಗಲಿದೆ. ಡಾ.ಸಿ.ಎನ್.ಮಂಜುನಾಥ್ ಅವರು ಪಕ್ಷಾತೀತವಾಗಿ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಕ್ಲೀನ್ ಇಮೇಜ್ ಬೆಳೆಸಿಕೊಂಡಿದ್ದಾರೆ. ಜೊತೆಗೆ ಮೋದಿ ಅಲೆ ಈಗಲೂ ಇದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಸಿ.ಎನ್.ಮಂಜುನಾಥ್ ಸ್ಪರ್ಧೆ ಮಾಡುವುದರಿಂದ ಅವರಿಗೆ ಸಾಕಷ್ಟು ಅನುಕೂಲವಾಗಲಿದೆ. ಬಿಜೆಪಿ ಮತಗಳ ಜೊತೆಗೆ ಅವರ ಅಭಿಮಾನಿಗಳ ಮತಗಳು ಸಿ.ಎನ್.ಮಂಜುನಾಥ್ ಅವರಿಗೆ ಬರಲಿವೆ. ಇದರ ಜೊತೆಗೆ ಮೊದಲಿನಿಂದಲೂ ಒಕ್ಕಲಿಗರು ಜೆಡಿಎಸ್ ಪರವಾಗಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಹೆಚ್ಚಿರುವ ಒಕ್ಕಲಿಗ ಮತಗಳೂ ಮಂಜುನಾಥ್ ಅವರ ಪರವಾಗಿ ಬೀಳಲಿವೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ; ಪಾಕಿಸ್ತಾನ ಮಹಿಳೆ ಸೀಮಾ ಹೈದರ್ ವಿರುದ್ಧ 3 ಕೋಟಿ ಮಾನನಷ್ಟ ಮೊಕದ್ದಮೆ