Loksabha; ದೇವೇಗೌಡರ ಅಳಿಯ ಬಿಜೆಪಿ ಅಭ್ಯರ್ಥಿ?; ಏನಿದು ರಾಜಕೀಯ ತಂತ್ರಗಾರಿಕೆ..?
ಬೆಂಗಳೂರು; ಕರ್ನಾಟಕದಲ್ಲಿ ಜೆಡಿಎಸ್ ಅಂದಾಕ್ಷಣ ನೆನಪಾಗೋದು ಕುಟುಂಬ ರಾಜಕೀಯ.. ಜೆಡಿಎಸ್ ಪಕ್ಷ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೆ ಸೀಮಿತವಾಗಿದೆ. ಅವರ ಕುಟುಂಬದ ಬಹುತೇಕರು ಈಗ ರಾಜಕೀಯದಲ್ಲಿದ್ದಾರೆ.. ಇದೀಗ ಅವರ ಅಳಿಯ ಹಾಗೂ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ಕೂಡಾ ರಾಜಕೀಯಕ್ಕೆ ಬರುತ್ತಿದ್ದಾರೆ.. ಆದ್ರೆ ಅವರು ಜೆಡಿಎಸ್‌ನಿಂದ ಸ್ಪರ್ಧೆ ಮಾಡುತ್ತಿಲ್ಲ. ಬದಲಾಗಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಳಿಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ,ಲೋಕಸಭಾ ಚುನಾವಣೆಗಾಗಿ ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದು, ದೇವೇಗೌಡರ ಅಳಿಯ ಡಾ.ಸಿ.ಎನ್.ಮಂಜುನಾಥ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಲು ಮುಂದಾಗಿರುವುದರ ಹಿಂದಿನ ರಾಜಕೀಯ ಲೆಕ್ಕಾಚಾರದ ಬಗ್ಗೆ ಕುತೂಹಲ ಕೆರಳಿಸಿದೆ.
ಇದನ್ನೂ ಓದಿ; ಬೆಂಗಳೂರಲ್ಲಿ ಕಾರ್ತೀಕ್ ಆರ್ಯನ್; ಮಸಾಲೆದೋಸೆ ಸವಿದ ಬಾಲಿವುಡ್ ನಟ
ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆ..?;
ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆ..?; ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಸಂಸದರಾಗಿದ್ದಾರೆ. ರಾಜ್ಯದಲ್ಲಿ ಇವರು ಏಕೈಕ ಕಾಂಗ್ರೆಸ್ ಸಂಸದ.. ಇವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಡಿ.ಕೆ.ಸುರೇಶ್ ಅವರನ್ನು ಸೋಲಿಸೋದಕ್ಕಾಗಿ ದೇವೇಗೌಡರ ಅಳಿಯ ಡಾ.ಸಿ.ಎನ್.ಮಂಜುನಾತ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಣತಂತ್ರ ರೂಪಿಸಿವೆ. ಮೊದಲಿಗೆ ರಾಜಕೀಯಕ್ಕೆ ಬರೋದಿಲ್ಲ ಎಂದು ಹೇಳುತ್ತಿದ್ದ ಡಾ.ಸಿ.ಎನ್.ಮಂಜುನಾಥ್ ಅವರು, ಈಗ ಜನ ರಾಜಕೀಯಕ್ಕೆ ಬರುವಂತೆ ಕೇಳುತ್ತಿದ್ದಾರೆ. ಹೀಗಾಗಿ ಯೋಚನೆ ಮಾಡಿ ನಿರ್ಧಾರ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ. ಬಹುತೇಕರು ಅಖಾಡಕ್ಕಿಳಿಯೋದು ಕನ್ಫರ್ಮ್ ಎಂದೇ ಹೇಳಲಾಗುತ್ತಿದೆ.
ಇದನ್ನೂ ಓದಿ; ಮದುವೆ ಮಾಡಿದ್ರೆ ಮಾತ್ರ ಶಾಲೆಗೆ ಹೋಗ್ತೀನಿ; ಹಠ ಹಿಡಿದಿದ್ದಕ್ಕೆ 13 ವರ್ಷ ಬಾಲಕನಿಗೆ ಮದುವೆ!
ಡಾ.ಸಿ.ಎನ್.ಮಂಜುನಾಥ್‌ಗೆ ಯಾಕಿಷ್ಟು ಬೇಡಿಕೆ..?;
ಡಾ.ಸಿ.ಎನ್.ಮಂಜುನಾಥ್‌ಗೆ ಯಾಕಿಷ್ಟು ಬೇಡಿಕೆ..?; ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ದಶಕಗಳ ಕಾಲ ಕೆಲಸ ಮಾಡಿದ್ದಾರೆ. ಈ ವೇಳೆ ಬಡ ರೋಗಿಗಳ ಸೇವೆ ಮಾಡಿದ್ದಾರೆ. ಹಣವಿಲ್ಲದಿದ್ದರೂ ಬಡ ರೋಗಿಗಳಿಗೆ ಚಿಕಿತ್ಸೆ ಕೊಡಿಸಿದ್ದಾರೆ. ಅವರು ವೈದ್ಯರಾಗಿ ಸೇವೆ ಮಾಡುತ್ತಿರುವ ವೇಳೆ ಎಂದೂ ಕೂಡಾ ರಾಜಕೀಯವಾಗಿ ಕಾಣಿಸಿಕೊಂಡಿರಲಿಲ್ಲ. ಸ್ವಂತ ಮಾವ ದೇವೇಗೌಡರು ಮಾಜಿ ಪ್ರಧಾನಿಯಾಗಿದ್ದರೂ, ಡಾ.ಸಿ.ಎನ್.ಮಂಜುನಾಥ್ ಅವರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಡಾ.ಸಿ.ಎನ್.ಮಂಜುನಾಥ್ ಅವರು ಕೋಟ್ಯಂತರ ಅಭಿಮಾನಿಗಳನ್ನು ಸೃಷ್ಟಿಸಿಕೊಂಡಿದ್ದಾರೆ. ಕೆಲದಿನಗಳ ಹಿಂದಷ್ಟೇ ಅವರು ಜಯದೇವ ಆಸ್ಪತ್ರೆ ನಿರ್ದೇಶಕ ಹುದ್ದೆಯಿಂದ ನಿವೃತ್ತರಾಗಿದ್ದಾರೆ. ಹೀಗಾಗಿ ಅವರನ್ನು ರಾಜಕೀಯಕ್ಕೆ ಕರೆತಂದು ಅವರ ಜನಪ್ರಿಯತೆಯನ್ನು ಲಾಭ ಮಾಡಿಕೊಳ್ಳಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮುಂದಾಗಿವೆ.
ಇದನ್ನೂ ಓದಿ; Drinking Water Problem; ನೀರಿನ ಅಭಾವ ನೀಗಿಸಲು ಅಗತ್ಯ ಸಿದ್ಧತೆ!
ಡಾ.ಸಿ.ಎನ್.ಮಂಜುನಾಥ್ ಜೆಡಿಎಸ್‌ನಿಂದ ಸ್ಪರ್ಧೆ ಏಕಿಲ್ಲ..?;
ಡಾ.ಸಿ.ಎನ್.ಮಂಜುನಾಥ್ ಜೆಡಿಎಸ್‌ನಿಂದ ಸ್ಪರ್ಧೆ ಏಕಿಲ್ಲ..?; ಡಾ.ಸಿ.ಎನ್.ಮಂಜುನಾಥ್ ಅವರು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಅಳಿಯ. ಇನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಿಜೆಪಿಗಿಂತ ಪ್ರಬಲವಾಗಿದೆ. ಹೀಗಿದ್ದರೂ ಡಾ.ಸಿ.ಎನ್.ಮಂಜುನಾಥ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಲು ತಯಾರಿ ನಡೆದಿದೆ. ಇದಕ್ಕೆ ಒಂದೆರಡು ಕಾರಣಗಳಿವೆ. ಜೆಡಿಎಸ್‌ನಿಂದ ಕಣಕ್ಕಿಳಿಸಿದರೆ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಪಕ್ಷಗಳು ಆರೋಪಿಸುತ್ತವೆ. ಯಾಕಂದ್ರೆ ಈಗಾಗಲೇ ದೇವೇಗೌಡರ ಕುಟುಂಬದಲ್ಲಿ ಆರಕ್ಕೂ ಹೆಚ್ಚು ಮಂದಿ ರಾಜಜಕೀಯದಲ್ಲಿದ್ದಾರೆ. ಇನ್ನು ಜೆಡಿಎಸ್‌ಗೆ ಈಗಾಗಲೇ ಮೂರು ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಜೆಪಿ ತೆಕ್ಕೆಯಲ್ಲೇ ಇರಲಿದೆ.. ಇನ್ನು ಡಾ.ಸಿ.ಎನ್.ಮಂಜುನಾಥ್ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ, ಬಿಜೆಪಿ ಇತರೆ ಕ್ಷೇತ್ರಗಳಲ್ಲೂ ಲಾಭವಾಗಲಿದೆ. ಡಾ.ಸಿ.ಎನ್.ಮಂಜುನಾಥ್ ಒಳ್ಳೆಯ ವ್ಯಕ್ತಿತ್ವ ಹೊಂದಿರುವುದರಿಂದ ಅದನ್ನು ಎನ್‌ಕ್ಯಾಶ್ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ.
ಇದನ್ನೂ ಓದಿ; ಮದುವೆಯಾಗಲು ಟಿವಿ ಆಂಕರ್ ಕಿಡ್ನ್ಯಾಪ್ ಮಾಡಿದ ಯುವತಿ; ನಂತರ ಕತೆಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್!