Politics

Loksabha; ಡಾ.ಸಿ.ಎನ್‌.ಮಂಜುನಾಥ್‌ ಸ್ಪರ್ಧೆ ಬಹುತೇಕ ಪಕ್ಕಾ; ಮಂಡ್ಯನಾ, ಗ್ರಾಮಾಂತರನಾ..?

ಬೆಂಗಳೂರು; ಮಾಜಿ ಪ್ರಧಾನಿ ದೇವೇಗೌಡರ ಅಳಿಯ, ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ (dr c.n.manjunath) ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡೋದು ಬಹುತೇಕ ಪಕ್ಕಾ ಆಗಿದೆ. ಈ ಮೊದಲು ಚುನಾವಣೆ ಬೇಡ ಎನ್ನುತ್ತಿದ್ದ ಡಾ.ಸಿ.ಎನ್‌.ಮಂಜುನಾಥ್‌ ಅವರು ಶೀಘ್ರದಲ್ಲೇ ನಿರ್ಧಾರ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ.. ಅದೂ ಕೂಡಾ ಮಂಡ್ಯದಲ್ಲಿ ನಿಂತು ಈ ಮಾತನ್ನು ಹೇಳಿದ್ದಾರೆ. ಇದನ್ನೆಲ್ಲಾ ನೋಡ್ತಾ ಇದ್ರೆ ಡಾ.ಸಿ.ಎನ್‌.ಮಂಜುನಾಥ್‌ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡೋದೂ ಬಹುತೇಕ ಪಕ್ಕಾ ಎನ್ನಬಹುದು.

ಇದನ್ನೂ ಓದಿ;DK Brothers; ಡಿಕೆ ಸಹೋದರರಿಗೆ ಬಿಜೆಪಿಯಿಂದ ಆಮಿಷ ಬಂದಿತ್ತಾ..?; ಡಿ.ಕೆ.ಸುರೇಶ್‌ ʻನಿರಂತರʼ ಉತ್ತರ!

ಮಂಡ್ಯ ಕ್ಷೇತ್ರನಾ, ಬೆಂಗಳೂರು ಗ್ರಾಮಾಂತರ ಕ್ಷೇತ್ರನಾ..?;

ಮಂಡ್ಯ ಕ್ಷೇತ್ರನಾ, ಬೆಂಗಳೂರು ಗ್ರಾಮಾಂತರ ಕ್ಷೇತ್ರನಾ..?; ಡಾ.ಸಿ.ಎನ್‌.ಮಂಜುನಾಥ್‌ ಅವರು ಜಯದೇವ ಆಸ್ಪತ್ರೆ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಸೇವೆ ಸಲ್ಲಿಸಿದ್ದಾರೆ. ಬಡ ರೋಗಿಗಳ ಪರಿವಾಗಿ ಕೆಲಸ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಇಷ್ಟಪಡುವ ಕೋಟ್ಯಂತರ ಅಭಿಮಾನಿಗಳು ಕರ್ನಾಟಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಡಾ.ಸಿ.ಎನ್‌.ಮಂಜುನಾಥ್‌ ಅವರನ್ನು ಕಣಕ್ಕಿಳಿಸೋದಕ್ಕೆ ಜೆಡಿಎಸ್‌ ಹಾಗೂ ಬಿಜೆಪಿ ಎರಡೂ ಪಕ್ಷಗಳು ರೆಡಿ ಇವೆ… ಸಾರ್ವಜನಿಕರು ಕೂಡಾ ಈ ಬಗ್ಗೆ ಒತ್ತಡ ತರುತ್ತಿದ್ದಾರೆ… ಕೆಲವರು ರಾಜಕೀಯ ಬೇಡ ಎಂದರೂ, ಬಹುಪಾಲು ಜನ ನಿಮ್ಮಂಥವರು ಬಂದರೆ ರಾಜಕೀಯದಲ್ಲಿ ಬದಲಾವಣೆ ತರಬಹುದು ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ; Loksabha election; ಕರಾವಳಿಯ 3 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಬದಲು..?

ಹೀಗಿರುವಾಗಲೇ, ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು ಅವರು ಕೂಡಾ ಮಂಜುನಾಥ್‌ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಒತ್ತಾಯ  ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಂಜುನಾಥ್‌ ಅವರು ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ. ಆದ್ರೆ ನಾನು ಇನ್ನೂ ತೀರ್ಮಾನ ಮಾಡಿಲ್ಲ. ರಾಜಕೀಯಕ್ಕೆ ಬರಬೇಕಾ, ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಬೇಕಾ ಎಂದು ಯೋಚಿಸುತ್ತಿದ್ದೇನೆ.. ಮುಂದೆ ಈ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದಿದ್ದಾರೆ.

ಅವರ ಮಾತುಗಳನ್ನು ನೋಡಿದರೆ ಬಹುತೇಕ ಅವರು ರಾಜಕೀಯಕ್ಕೆ ಬರೋದು ಪಕ್ಕಾ ಎನಿಸುತ್ತಿದೆ. ಆದ್ರೆ, ಬಿಜೆಪಿಯಿಂದ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಸೋ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಅವರು ಮಂಡ್ಯ ಆಯ್ಕೆ ಮಾಡಿಕೊಳ್ಳುತ್ತಾರಾ ಅಥವಾ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಾರಾ ನೋಡಬೇಕು.

ಇದನ್ನೂ ಓದಿ; Karimani maaleeka; ಇವರೇ ನೋಡಿ ʻಕರಿಮಣಿ ಮಾಲೀಕʼ ಹಾಡಿನ ಗಾಯಕಿ!

ಬಿಜೆಪಿ ಟಿಕೆಟ್‌ ಕೇಳುತ್ತಿರುವ ಸಂಸದೆ ಸುಮಲತಾ;

ಬಿಜೆಪಿ ಟಿಕೆಟ್‌ ಕೇಳುತ್ತಿರುವ ಸಂಸದೆ ಸುಮಲತಾ; ಮಂಡ್ಯ ಸಂಸದೆ ಸುಮಲತಾ  ಅಂಬರೀಶ್‌ ಅವರು ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಕೇಳುತ್ತಿದ್ದಾರೆ.. ಆದ್ರೆ ಜೆಡಿಎಸ್‌ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡೋದು ಬಹುತೇಕ ಪಕ್ಕಾ ಆಗಿದೆ. ಹಾಗೇನಾದರೂ ಆದರೆ ಅಲ್ಲಿ ಕುಮಾರಸ್ವಾಮಿಯವರು ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ದೇವೇಗೌಡರ ಮನೆಯಲ್ಲಿ ಮಂಡ್ಯ ಕ್ಷೇತ್ರ ವ್ಯಾಪ್ತಿಯ ಮುಖಂಡರ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೆ ಅಕ್ಕಪಕ್ಕದ ಕ್ಷೇತ್ರಗಳಲ್ಲಿ ಬಿಜೆಪಿಗೆ ಲಾಭವಾಗುತ್ತದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯವರೇ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ತರುತ್ತಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ, ಕುಮಾರಸ್ವಾಮಿಯವರಿಗೆ ಕೇಂದ್ರದಲ್ಲಿ ಮಂತ್ರಿಗಿರಿ ನೀಡುವ ಬಗ್ಗೆಯೂ ಚರ್ಚೆಯಾಗಿದೆ ಎನ್ನಲಾಗಿದೆ.

 

Share Post