Loksabha Election; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕ್ಷಣಗಣನೆ; ಇವರೇನಾ 17 ಅಭ್ಯರ್ಥಿಗಳು..?
ಬೆಂಗಳೂರು; ಇವತ್ತು ಬಹುತೇಕ ಕಾಂಗ್ರೆಸ್ ಎರಡನೇ ಪಟ್ಟಿ ರಿಲೀಸ್ ಆಗಲಿದೆ.. ಘೋಷಣೆಯಾಗಬೇಕಾದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.. ಇಂದು ಸಂಜೆಯ ವೇಳೆ ರಾಜ್ಯದ 17 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗುವ ಸಾಧ್ಯತೆ ಇದೆ.. ರಾಜ್ಯದ ನಾಯಕರು ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ… ನಿನ್ನೆ ಇಡೀ ಈ ಬಗ್ಗೆ ಸಭೆಗಳು ನಡೆದಿವೆ.. ಬಹುತೇಕ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮವಾಗಿದ್ದಾರೆ…
ಇದನ್ನೂ ಓದಿ; ಚುನಾವಣೆ ಬಳಿಕ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಳ್ತಾರೆ; ಮಾಜಿ ಸಚಿವ ಈಶ್ವರಪ್ಪ
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ರಾಜ್ಯದಲ್ಲಿ ಇನ್ನೂ ಏಳು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ.. ಇನ್ನೂ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮಗೊಳಿಸಬೇಕಿದೆ.. ನಿನ್ನೆ ದೆಹಲಿಯಲ್ಲಿ ಸಭೆ ನಡೆದಿದ್ದು, ಇವತ್ತೂ ಕೂಡಾ ಮುಂದುವರೆದಿದೆ.. ಬಹುತೇಕ ಇವತ್ತು ಪಟ್ಟಿ ಅಂತಿಮವಾಗುವ ಸಾಧ್ಯತೆ ಇದೆ.. ಮೊದಲಿನಿಂದಲೂ ಸಚಿವರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಪ್ರಯತ್ನಪಡುತ್ತಿದ್ದರು.. ಸುಮಾರು ಹತ್ತಕ್ಕೂ ಹೆಚ್ಚು ಸಚಿವರನ್ನು ಲೋಕಸಭಾ ಅಖಾಡಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಸಜ್ಜಾಗಿತ್ತು.. ಆದ್ರೆ ಯಾವ ಸಚಿವರೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದಕ್ಕೆ ಒಪ್ಪಿಲ್ಲ.. ಹೀಗಾಗಿ ಸಚಿವರ ಮಕ್ಕಳು ಹಾಗೂ ಸಂಬಂಧಿಕರಿಗೆ ಹೆಚ್ಚು ಮಣೆ ಹಾಕಲಾಗುತ್ತಿದೆ.. ಮಾಹಿತಿ ಪ್ರಕಾರ ಎರಡನೇ ಲಿಸ್ಟ್ ನಲ್ಲಿ ಐವರು ಸಚಿವರ ಮಕ್ಕಳಿಗೆ ಕಾಂಗ್ರೆಸ್ ಟಿಕೆಟ್ ನೀಡಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಐದು ಕ್ಷೇತ್ರಗಳಲ್ಲಿ ಟಿಕೆಟ್ ಗಾಗಿ ತೀವ್ರ ಪೈಪೋಟಿ ಇರುವುದರಿಂದ ಆ ಕ್ಷೇತ್ರಗಳಿಗೆ ಟಿಕೆಟ್ ಇನ್ನೂ ಅಂತಿಮಗೊಳಿಸಿಲ್ಲ ಎಂದು ತಿಳಿದುಬಂದಿದೆ..
ಮೂಲಗಳ ಪ್ರಕಾರ 17 ಕ್ಷೇತ್ರಗಳಿಗೆ ಟಿಕೆಟ್ ಅಂತಿಮವಾಗಿದೆ.. ಈ ಕೆಳಕಂಡವರನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ; ಶುಕ್ರವಾರ ಬಿಜೆಪಿಯ ಉಳಿದ 5 ಕ್ಷೇತ್ರಗಳ ಪಟ್ಟಿ ರಿಲೀಸ್; ಯಾರು ಆ ಅಭ್ಯರ್ಥಿಗಳು..?
ಸಿಇಸಿ ಅಂತಿಮಗೊಳಿಸಿರುವ ಅಭ್ಯರ್ಥಿಗಳ ವಿವರ;
=================================
ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿ
ಬೆಂಗಳೂರು ಸೆಂಟ್ರಲ್ -ಮನ್ಸೂರ್ ಅಲಿಖಾನ್
ಬೆಂಗಳೂರು ಉತ್ತರ -ಪ್ರೊ.ರಾಜೀವ್ ಗೌಡ
ಮೈಸೂರು -ಎಂ.ಲಕ್ಷ್ಮಣ್
ರಾಯಚೂರು -ಜಿ.ಕುಮಾರ ನಾಯಕ್
ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್
ಚಿತ್ರದುರ್ಗ -ಬಿ.ಎನ್.ಚಂದ್ರಪ್ಪ
ಬೆಳಗಾವಿ – ಮೃಣಾಲ್ ಹೆಬ್ಬಾಳಕರ್
ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ
ಬಾಗಲಕೋಟೆ – ಸಂಯುಕ್ತಾ ಪಾಟೀಲ್
ಧಾರವಾಡ – ವಿನೋದ್ ಅಸುಟಿ
ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ
ಕೊಪ್ಪಳ – ರಾಜಶೇಖರ ಹಿಟ್ನಾಳ್
ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ
ಬೀದರ್ – ರಾಜಶೇಖರ್ ಪಾಟೀಲ್
ದಕ್ಷಿಣ ಕನ್ನಡ – ಪದ್ಮರಾಜ್
ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್ ಹೆಗ್ಡೆ
ಇದನ್ನೂ ಓದಿ; ಪಕ್ಕದ ಮನೆ ದಂಪತಿ ಸರಸ ಸಲ್ಲಾಪ ನೋಡೋಕೆ ಆಗ್ತಿಲ್ಲ; ಬೆಂಗಳೂರು ಮಹಿಳೆಯಿಂದ ವಿಚಿತ್ರ ದೂರು