Politics

Loksabha Election Date; ಮಧ್ಯಾಹ್ನ ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ; ಇಂದಿನಿಂದಲೇ ನೀತಿ ಸಂಹಿತೆ!

ನವದೆಹಲಿ; ಇಂದು ಲೋಕಸಭಾ ಚುನಾವಣಾಗೆ  ಮೂಹೂರ್ತ ಫಿಕ್ಸ್‌ ಆಗಲಿದೆ.. ಇಂದು ಮಧ್ಯಾಹ್ನ 3 ಗಂಟೆಗೆ ಲೋಕಸಭಾ ಚುನಾವಣೆಯ ವೇಳಾಪಟ್ಟಿ ಘೋಷಣೆಯಾಗಲಿದೆ.. 7 ಹಂತಗಳಲ್ಲಿ ಮತದಾನ ನಡೆಯುವ ಸಾಧ್ಯತೆ ಇದ್ದು, ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಕೇಂದ್ರ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ಕರೆದಿದ್ದಾರೆ. ಈ ವೇಳೆ  ಲೋಕಸಭಾ ಚುನಾವಣೆಯ ವೇಳಾಪಟ್ಟಿ ಘೋಷಣೆ ಮಾಡಲಾಗುತ್ತದೆ.

ಇದನ್ನೂ ಓದಿ; ಮಲ್ಲಿಕಾರ್ಜುನ ಖರ್ಗೆ ತವರಲ್ಲಿ ಪ್ರಧಾನಿ ಮೋದಿ ಹವಾ; ಇಂದು ಬೃಹತ್‌ ಸಮಾವೇಶ

 ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ;

ದೆಹಲಿಯ ವಿಜ್ಞಾನ್ ಭವನದಲ್ಲಿರುವ ಚುನಾವಣಾ ಆಯೋಗದ ಕಚೇರಿಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ನೇತೃತ್ವದ ಚುನಾವಣಾ ಆಯೋಗ, ಲೋಕಸಭಾ ಚುನಾವಣೆಯ ದಿನಾಂಕ ಸೇರಿ ಇತರೆ ಮಾಹಿತಿಗಳನ್ನು ನೀಡಲಿದೆ.

ಚುನಾವಣೆ ಎಷ್ಟು ಹಂತಗಳಲ್ಲಿ ನಡೆಯಲಿದೆ..? ನಾಮಪತ್ರ ಸಲ್ಲಿಕೆ, ವಾಪಸ್‌, ಮತದಾನದ ದಿನಾಂಕಗಳು, ಮತ ಎಣಿಕೆ ದಿನಾಂಕ ಹೀಗೆ ಎಲ್ಲಾ ಮಾಹಿತಿ ಸಿಗಲಿದೆ. ಭದ್ರತಾ ವಿಚಾರದ ಬಗ್ಗೆಯೂ ಮಾಹಿತಿ ಸಿಗಲಿದೆ.
ನಿನ್ನೆ ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಬೆನ್ನಲ್ಲೇ ಅವರು ಮುಖ್ಯಚುನಾವಣಾ ಆಯುಕ್ತ ರಾಜೀವ್ ಕುಮಾರ್ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.  ಮಧ್ಯಾಹ್ನ 3 ಗಂಟೆಗೆ ಚುನಾವಣೆ ದಿನಾಂಕ ಘೋಷಣೆಗೆ ಸಮಯ ನಿಗಧಿ ಮಾಡಿದ್ದಾರೆ.

ಇದನ್ನೂ ಓದಿ; Mysore Loksabha; ಮೈಸೂರಲ್ಲಿ ಯತೀಂದ್ರ-ಯದುವೀರ ಯುದ್ಧ ಫಿಕ್ಸ್‌!

ಏಳು ಹಂತಗಳಲ್ಲಿ ಮತದಾನ ನಡೆಯುವ ಸಾಧ್ಯತೆ;

ಕಳೆದ ಚುನಾವಣೆಯಲ್ಲಿ 7 ಹಂತಗಳಲ್ಲಿ ಮತದಾನ ನಡೆಸಲಾಗಿತ್ತು. ಈ ಬಾರಿಯೂ ಕೂಡಾ ಅದೇ ರೀತಿ ಏಳು ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಸೂಕ್ಷ್ಮ ಪ್ರದೇಶಗಳಿರುವ ರಾಜ್ಯಗಳಲ್ಲಿ ಎರಡು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ; ಯಡಿಯೂರಪ್ಪ ಪುತ್ರನ ವಿರುದ್ಧ ಈಶ್ವರಪ್ಪ ಸ್ಪರ್ಧೆ; ಘೋಷಣೆ

ನಾಳೆಯಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ;

ಇಂದು ಚುನಾವಣಾ ದಿನಾಂಕ ಘೋಷಣೆ ಮಾಡಲಿರುವುದರಿಂದ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.. ಇನ್ನ ಮೇಲೆ ಎಲ್ಲೆಡೆ ಭದ್ರತೆಗಳು ಹೆಚ್ಚಾಗಲಿವೆ.. ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ಕೂಡಾ ಶುರುವಾಗಲಿವೆ.. ಇನ್ನು ಇಂದೇ ಪ್ರಧಾನಿ ನರೇಂದ್ರ ಮೋದಿ ಕಲಬುರಗಿಗೆ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ; ರಾಮ್‌ಗೋಪಾಲ್‌ ವರ್ಮಾ ಚುನಾವಣೆಗೆ ಸ್ಪರ್ಧಿಸ್ತಾರಂತೆ; ಟ್ವೀಟ್‌ನಲ್ಲಿ ಏನಿದೆ..?

 

Share Post