Politics

Loksabha; ಚಿತ್ರದುರ್ಗಕ್ಕೆ ಮಾದಾರ ಚೆನ್ನಯ್ಯ ಶ್ರೀ, ಬೆಂ. ಗ್ರಾಮಾಂತರಕ್ಕೆ ಡಾ.ಸಿ.ಎನ್.ಮಂಜುನಾಥ್?

ಬೆಂಗಳೂರು; ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆದಿದೆ. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿವೆ. ಜೆಡಿಎಸ್ ಗೆ ಮೂರು ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ. ಇತ್ತ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ನಾನಾ ತಂತ್ರಗಾರಿಕೆ ನಡೆಸುತ್ತಿದೆ. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಹೋದರ ಡಿ.ಕೆ.ಸುರೇಶ್‌ ರನ್ನು ಸೋಲಿಸಲು ಬಿಜೆಪಿ ಬಾರಿ ಪ್ಲ್ಯಾನ್‌ ಮಾಡಿದೆ. ಅದಕ್ಕಾಗಿ, ದೇವೇಗೌಡರ ಅಳಿಯ ಹಾಗೂ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್‌ ಅವರನ್ನು ಕಣಕ್ಕಿಳಿಸೋದಕ್ಕೆ ತಯಾರಿ ನಡೆದಿದೆ. ಇನ್ನೊಂದೆಡೆ, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮಾದಾರ ಚೆನ್ನಯ್ಯ ಸ್ವಾಮೀಜಿಯನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿಯಲ್ಲಿ ಚಿಂತನೆ ನಡೆದಿದೆ.

ಇದನ್ನೂ ಓದಿ;ಶಿವಪುರ-ಫುಲ್ವಾರಿಯಾ-ಲಹರ್ತಾರಾ ಮಾರ್ಗ ವೀಕ್ಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗಕ್ಕೆ ಮಾದಾರ ಚೆನ್ನಯ್ಯ ಸ್ವಾಮೀಜಿ ಏಕೆ..?;

ಚಿತ್ರದುರ್ಗಕ್ಕೆ ಮಾದಾರ ಚೆನ್ನಯ್ಯ ಸ್ವಾಮೀಜಿ ಏಕೆ..?; ಚಿತ್ರದುರ್ಗ ಲೋಕಸಭಾ ಕ್ಷೇತ್ರ ಎಸ್‌ಸಿ ಮೀಸಲು ಕ್ಷೇತ್ರವಾಗಿದೆ. ಸದ್ಯ ಕೇಂದ್ರ ಸಚಿವ ನಾರಾಯಣಸ್ವಾಮಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.. ಆದ್ರೆ ಈ ಬಾರಿ ನಾರಾಯಣಸ್ವಾಮಿಯವರು ಸ್ಪರ್ಧೆ ಮಾಡೋದಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರನ್ನು ಕಣಕ್ಕಿಳಿಸೋದಕ್ಕೆ ಬಿಜೆಪಿ ಮುಂದಾಗಿದೆ. ಮಾದಾರ ಚೆನ್ನಯ್ಯ ಸ್ವಾಮೀಜಿಯವರು ಮೊದಲಿನಿಂದಲೂ ಬಿಜೆಪಿ ಹೈಕಮಾಂಡ್‌ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.. ಆರ್‌ಎಸ್‌ಎಸ್‌ ಮುಖಂಡರ ಜೊತೆ ಸಂಪರ್ಕ ಇಟ್ಟುಕೊಂಡಿದ್ದಾರೆ.. ಈ ಹಿನ್ನೆಲೆಯಲ್ಲಿ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸೋದಕ್ಕೆ ಪ್ರಯತ್ನ ನಡೆದಿದೆ. ಕಳೆದ ಬಾರಿಯೇ ಚಿತ್ರದುರ್ಗದಿಂದ ಮಾದಾರ ಚೆನ್ನಯ್ಯ ಸ್ವಾಮೀಜಿಯವರನ್ನು ಕಣಕ್ಕಿಳಿಸುವ ಪ್ರಯತ್ನ ನಡೆದಿತ್ತು. ಆದ್ರೆ ಆಗ ಸ್ವಾಮೀಜಿ ಒಪ್ಪಿರಲಿಲ್ಲ. ಈ ಬಾರಿ ಸ್ವಾಮೀಜಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕ್ಷೇತ್ರದಲ್ಲಿ ಮಾದಿಗ ಸಮುದಾಯದ 4 ಲಕ್ಷ ಮತಗಳು;

ಕ್ಷೇತ್ರದಲ್ಲಿ ಮಾದಿಗ ಸಮುದಾಯದ 4 ಲಕ್ಷ ಮತಗಳು; ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 4 ಲಕ್ಷ ಮಾದಿಗ ಸಮುದಾಯಕ್ಕೆ ಸೇರಿದ ಮತಗಳಿವೆ.. ಈ ಹಿನ್ನೆಲೆಯಲ್ಲಿ ಸ್ವಾಮೀಜಿಯವರನ್ನು ಕಣಕ್ಕಿಳಿಸದರೆ ಸುಲಭವಾಗಿ ಗೆಲ್ಲಬಹುದು ಎಂಬ ಲೆಕ್ಕಾಚಾರ ಬಿಜೆಪಿಯದ್ದು.. ಇನ್ನು ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಹೈಕಮಾಂಡ್‌ ನಾಯಕರ ಜೊತೆ ಸ್ವಾಮೀಜಿ ಉತ್ತಮ ಬಾಂದವ್ಯ ಹೊಂದಿರುವುದರಿಂದ ಸ್ವಾಮೀಜಿ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಜೊತೆಗೆ ಸ್ವಾಮೀಜಿ ಚುನಾವಣಾ ಅಖಾಡಕ್ಕಿಳಿದರೆ, ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಯ ಎಡಗೈ ಮತಗಳನ್ನು ಸೆಳೆಯಲು ಅನುಕೂಲವಾಗುತ್ತದೆ ಎಂಬ ಲೆಕ್ಕಾಚಾರವನ್ನು ಕೂಡಾ ಬಿಜೆಪಿ ನಾಯಕರು ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ; ಆಯೋಧ್ಯೆಯಿಂದ ವಾಪಸ್ಸಾಗುತ್ತಿದ್ದವರಿಗೆ ಬೆದರಿಕೆ; ರೈಲಿಗೆ ಬೆಂಕಿ ಹಚ್ಚುವ ಧಮ್ಕಿ!

ಸ್ವಾಮೀಜಿಗೆ ಟಿಕೆಟ್‌ ಕೊಡಬೇಕೆಂದ ಬಿಜೆಪಿ ನಾಯಕ ಕೆ.ಎಸ್‌.ಈಶ್ವರಪ್ಪ!;

ಸ್ವಾಮೀಜಿಗೆ ಟಿಕೆಟ್‌ ಕೊಡಬೇಕೆಂದ ಬಿಜೆಪಿ ನಾಯಕ ಕೆ.ಎಸ್‌.ಈಶ್ವರಪ್ಪ!; ರಾಜ್ಯ ಬಿಜೆಪಿ ನಾಯಕರು ಕೂಡಾ ಮಾದಾರ ಚೆನ್ನಯ್ಯ ಸ್ವಾಮೀಜಿ ರಾಜಕೀಯಕ್ಕೆ ಬರಬೇಕೆಂದು ಬಯಸುತ್ತಿದ್ದಾರೆ. ಇತ್ತೀಚೆಗೆ ಬಿಜೆಪಿ ನಾಯಕ ಕೆ.ಎಸ್‌.ಈಶ್ವರಪ್ಪ ಅವರು ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾದಾರ ಚೆನ್ನಯ್ಯ ಸ್ವಾಮೀಜಿಯವರು ರಾಜಕೀಯಕ್ಕೆ ಬರಬೇಕು ಎಂದಿದ್ದರು. ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಟಿಕೆಟ್ ಕೊಟ್ರೆ ನಾನು ಖುಷಿ ಪಡುತ್ತೇನೆ.  ಮಾದರ ಚೆನ್ನಯ್ಯ ಸ್ವಾಮೀಜಿಗಳು ಯಾಕೆ ರಾಜಕೀಯಕ್ಕೆ ಬರಬಾರದು. ದೇಶ ಸೇವೆ ಮಾಡಲು ಸ್ವಾಮೀಜಿಗಳು ರಾಜಕೀಯಕ್ಕೆ ಬರಬಹುದು’’ ಎಂದು ಈಶ್ವರಪ್ಪ ಹೇಳಿದ್ದರು.

ಇದನ್ನೂ ಓದಿ; ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನಗಳಲ್ಲಿ ಗೆಲ್ಲುತ್ತೆ; ಸಿದ್ದರಾಮಯ್ಯ

ಡಾ.ಸಿ.ಎನ್‌.ಮಂಜುನಾಥ್‌ ಅವರ ಮನವೊಲಿಸಲು ತಂತ್ರ;

ಡಾ.ಸಿ.ಎನ್‌.ಮಂಜುನಾಥ್‌ ಅವರ ಮನವೊಲಿಸಲು ತಂತ್ರ; ಹೃದ್ರೋಗ ತಜ್ಞ ಡಾ.ಸಿ.ಎನ್‌.ಮಂಜುನಾಥ್‌ ಇತ್ತೀಚೆಗಷ್ಟೇ ಪ್ರತಿಷ್ಠಿತ ಆಸ್ಪತ್ರೆ ಜಯದೇವ ನಿರ್ದೇಶಕ ಸ್ಥಾನದಿಂದ ನಿವೃತ್ತರಾಗಿದ್ದಾರೆ. ಅವರು ಜಯದೇವ ನಿರ್ದೇಶಕರಾಗಿ ಬಡ ರೋಗಿಗಳಿಗೆ ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಅಳಿಯರಾದರೂ ಯಾವುದೇ ರಾಜಕೀಯ ಮಾಡದೇ ನಿಸ್ಪಕ್ಷಪಾತವಾಗಿ ಅವರು ಸೇವೆ ಸಲ್ಲಿಸಿದ್ದು, ರಾಜ್ಯದಲ್ಲಿ ಕೋಟ್ಯಂತರ ಅಭಿಮಾನಿಗಳನ್ನು ಪಡೆದಿದ್ದಾರೆ. ಡಾ.ಸಿ.ಎನ್‌.ಮಂಜುನಾಥ್‌ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸೋದಕ್ಕೆ ಬಿಜೆಪಿ ಹೈಕಮಾಂಡ್‌ ಪ್ರಯತ್ನ ಮಾಡುತ್ತಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ವಿರುದ್ಧ ಕಣಕ್ಕಿಳಿಸೋದಕ್ಕೆ ಚಿಂತನೆ ನಡೆದಿದೆ. ಡಾ.ಮಂಜುನಾಥ್‌ ಅವರು ಇನ್ನೂ ಈ ಬಗ್ಗೆ ತೀರ್ಮಾನ ಮಾಡಿಲ್ಲ. ಆದ್ರೆ ಮೂಲಗಳ ಪ್ರಕಾರ ಅವರು ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

 

 

Share Post