NationalPolitics

Loksabha; ಲೋಕಸಭಾ ಚುನಾವಣೆಯಲ್ಲಿ AI ಬಳಕೆ; ಸುಳ್ಳು ಸುದ್ದಿಗಳಿಗೆ ಬೀಳುತ್ತಾ ಬ್ರೇಕ್‌?

ಬೆಂಗಳೂರು; ಎಲ್ಲಾ ಪಕ್ಷಗಳೂ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿವೆ.. ಇನ್ನೊಂದೆಡೆ ಕೇಂದ್ರ ಚುನಾವಣಾ ಆಯೋಗವೂ ಕೂಡಾ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಅಂತಿಮ ಹಂತದ ಸಭೆಗಳನ್ನು ಚುನಾವಣಾ ಆಯೋಗ ನಡೆಸುತ್ತಿದೆ. ಮಾಹಿತಿಗಳ ಪ್ರಕಾರ ಮಾರ್ಚ್‌ 15ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆ ಸಾಧ್ಯತೆ ಇದೆ.

ಇದನ್ನೂ ಓದಿ; Bommai; ಕಾಂಗ್ರೆಸ್‌ ಅವಧಿಯಲ್ಲೇ ರಾಜ್ಯಗಳಿಗೆ ಹೆಚ್ಚು ಅನ್ಯಾಯವಾಗಿದೆ; ಬಸವರಾಜ ಬೊಮ್ಮಾಯಿ‌

ಮಾರ್ಚ್‌ 15ಕ್ಕೆ ದಿನಾಂಕ ಘೋಷಣೆಯಾಗುತ್ತಾ..?;

ಮಾರ್ಚ್‌ 15ಕ್ಕೆ ದಿನಾಂಕ ಘೋಷಣೆಯಾಗುತ್ತಾ..?; ಚುನಾವಣೆ ವೇಳೆ ಭದ್ರತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಎಲ್ಲಾ ರಾಜ್ಯಗಳಲ್ಲೂ ಸಭೆಗಳನ್ನು ಮಾಡಿದ್ದಾರೆ. ಇದೀಗ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ತಮಿಳುನಾಡು ಪ್ರವಾಸದಲ್ಲಿದ್ದಾರೆ. ಅಲ್ಲಿ ಅಧಿಕಾರಿಗಳ ಜೊತೆ ಸಭೆಗಳನ್ನು ನಡೆಸುತ್ತಿದ್ದಾರೆ. ಇದಾದ ಮೇಲೆ ಉತ್ತರ ಪ್ರದೇಶ ಹಾಗೂ ಜಮ್ಮು-ಕಾಶ್ಮೀರಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಈ ಸಭೆಗಳಿಗೆ ಒಂದು ದಿನಾಂಕ ನಿಗಧಿ ಮಾಡಿದ್ದಾರೆ. ಮಾರ್ಚ್‌ 13ರೊಳಗೆ ಎಲ್ಲಾ ರಾಜ್ಯಗಳ ಭೇಟಿ ಹಾಗೂ ಪರಿಶೀಲನೆ ಮುಗಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಹೀಗಾಗಿ ಮಾರ್ಚ್‌ 15ಕ್ಕೆ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ; ಪತಿಗೇ ತಿಂಗಳಿಗೆ 5 ಸಾವಿರ ಜೀವನಾಂಶ ನೀಡಲು ಆದೇಶ; ಗಮನ ಸೆಳೆದ ಕೋರ್ಟ್‌ ತೀರ್ಪು

ಹಲವು ಸುತ್ತಿನ ಸಭೆಗಳನ್ನು ನಡೆಸಿರುವ ಆಯೋಗ;

ಹಲವು ಸುತ್ತಿನ ಸಭೆಗಳನ್ನು ನಡೆಸಿರುವ ಆಯೋಗ; ಇದು ವಿದ್ಯಾರ್ಥಿಗಳ ಪರೀಕ್ಷಾ ಸಮಯ.. ಹೀಗಾಗಿ ಪರೀಕ್ಷಾ ದಿನಾಂಕಗಳನ್ನು ಚುನಾವಣೆಗೆ ಅನುಕೂಲವಾಗುವಂತೆ ಸರಿದೂಗಿಸಬೇಕು… ಇದರ ಜೊತೆಗೆ ಸೂಕ್ಷ್ಮ ಪ್ರದೇಶಗಳು. ಮತಯಂತ್ರಗಳ ಸಾಗಣೆ, ಭದ್ರತೆ, ತಪಾಸಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಎಲ್ಲಾ ರಾಜ್ಯಗಳಲ್ಲೂ ಸತತವಾಗಿ ಚರ್ಚೆ ಮಾಡಲಾಗಿದೆ. ಈ ಬಾರಿ ಜಮ್ಮು-ಕಾಶ್ಮೀರದಲ್ಲಿ ಹೈ ಅಲರ್ಟ್‌ ಮಾಡಲಾಗುತ್ತದೆ. ಹೀಗಾಗಿ ಚುನಾವಣಾಧಿಕಾರಿಗಳು ಜಮ್ಮು-ಕಾಶ್ಮೀರದ ಬಗ್ಗೆ ಹೆಚ್ಚಿನ ಗಮನ ಕೊಟ್ಟಿದ್ದಾರೆ. ಚುನಾವಣೆ ಸುಗಮವಾಗಿ ನಡೆಸುವುದಕ್ಕೆ ಎಲ್ಲಾ ವ್ಯವಸ್ಥೆಗಳನ್ನೂ ಮಾಡಿಕೊಳ್ಳಲಾಗುತ್ತಿದೆ. ಕಳೆದ ಬಾರಿ ಮಾರ್ಚ್‌ 10ರಂದು ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿತ್ತು. ಈ ಬಾರಿ ಮಾರ್ಚ್‌ 15ಕ್ಕೆ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ; Breaking; ಲೋಕಸಭೆ ವಿಪಕ್ಷ ನಾಯಕ ಅಧೀರ್‌ ರಂಜನ್‌ ಬಿಜೆಪಿ ಸೇರ್ಪಡೆ ಸಾಧ್ಯತೆ!

ಮೊದಲ ಬಾರಿಗೆ ಎಐ ತಂತ್ರಜ್ಞಾನ ಬಳಕೆ;

ಮೊದಲ ಬಾರಿಗೆ ಎಐ ತಂತ್ರಜ್ಞಾನ ಬಳಕೆ; ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಕೃತಕ ಬುದ್ಧಿಮತ್ತೆ ಬಳಸಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಬ್ಬಿಸುವವರ ವಿರುದ್ಧ ನಿಗಾ ವಹಿಸೋದಕ್ಕಾಗಿ ಈ ತಂತ್ರಜ್ಞಾನ ಬಳಸಲಾಗುತ್ತಿದೆ. ಚುನಾವಣೆ ವೇಳೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಈ ತಂತ್ರಜ್ಞಾನ ಬಳಕೆಯಾಗುತ್ತಿದೆ. ಎಐ ತಂತ್ರಜ್ಞಾನದ ಮೂಲಕ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳನ್ನು ಗುರುತಿಸಿ, ಆವುಗಳನ್ನು ತಕ್ಷಣ ತೆಗೆಯುವ ಕೆಲಸ ನಡೆಯುತ್ತದೆ.

ಚುನಾವಣಾ ಆಯೋಗದಲ್ಲಿ ಕೃತಕ ಬುದ್ಧಿಮತ್ತೆಗೆ ಮೀಸಲಾದ ಘಟಕವೊಂದನ್ನು ಈಗಾಗಲೇ ತೆರೆಯಲಾಗಿದೆ. ಯಾವುದೇ ಪಕ್ಷ ಅಥವಾ ಅಭ್ಯರ್ಥಿ ನಿಯಮಗಳ ಉಲ್ಲಂಘನೆ ಮಾಡಿದರೆ, ಅವರ ಸಾಮಾಜಿಕ ಜಾಲತಾಣದ ಖಾತೆಯನ್ನು ಬ್ಲಾಕ್‌ ಮಾಡಲಾಗುತ್ತದೆ. ಫ್ಯಾಕ್ಟ್ ಚೆಕ್ಕಿಂಗ್, ಸುಳ್ಳು ಸುದ್ದಿಗಳನ್ನು ತಡೆಯುವುದು, ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ; Smoking and eye disease; ಧೂಮಪಾನದಿಂದ ಕ್ಯಾನ್ಸರ್‌ ಅಷ್ಟೇ ಬರಲ್ಲ, ಕಣ್ಣೂ ಕಾಣ್ಸೋದಿಲ್ಲ!

 

Share Post