Politics

ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್‌ ರಾಜೀನಾಮೆ; ಕಾರಣ ಏನು ಗೊತ್ತಾ..?

ಮುಂಬೈ; ದೆಹಲಿಯಲ್ಲಿ ರಾಜಕೀಯ ಮೇಲಾಟಗಳು ನಡೆಯುತ್ತಿರುವಾಗಲೇ ಮಹಾರಾಷ್ಟ್ರದಲ್ಲಿ ಒಂದು ರಾಜಕೀಯ ಬೆಳವಣಿಗೆ ನಡೆದಿದೆ.. ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್‌ ಅವರು ತಮ್ಮ ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.. ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ತುಂಬಾ ನಿರಾಶಾದಾಯಕ ಪ್ರದರ್ಶನ ನೀಡಿದೆ.. ಈ ಹಿನ್ನೆಲೆಯಲ್ಲಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ..

ಮಹಾರಾಷ್ಟ್ರದಲ್ಲಿ ಬಿಜೆಪಿಯ ಕಳೆದ ಬಾರಿ 23 ಸ್ಥಾನಗಳಲ್ಲಿ ಗೆದ್ದಿತ್ತು.. ಆದ್ರೆ ಈ ಬಾರಿ ಅದು 9 ಸ್ಥಾನಗಳಿಗೆ ಕುಸಿದಿದೆ.. ಇದರಿಂದಾಗಿ ಡಿಸಿಎಂ ದೇವೇಂದ್ರ ಫಡ್ನವಿಸ್‌ ತೀವ್ರ ಮುಜುಗರಕ್ಕೊಳಗಾಗಿದ್ದಾರೆ.. ನೈತಿಕ ಹೊಣೆ ಹೊತ್ತು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.. ಮುಂಬರುವ ವಿಧಾನಸಭಾ ಚುನಾವಣೆಯ್ಲಿ ಉತ್ತಮ ಫಲಿತಾಂಶ ಬರುವುದಕ್ಕಾಗಿ ನಾನು ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ..

 

Share Post