INDIA ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ
ನವದೆಹಲಿ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು INDIA ಮೈತ್ರಿಕೂಟದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿದೆ. ಇಂದು ಮೈತ್ರಿಕೂಟದ ವರ್ಚುಯಲ್ ಸಭೆ ನಡೆಸಲಾಯಿತು. ಈ ಸಭೆಯಲ್ಲಿ 14 ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮೈತ್ರಿಕೂಟದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇಂಡಿಯಾ ಒಕ್ಕೂಟದ ಸಂಚಾಲಕರಾಗುವಂತೆ ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಕೇಳಲಾಗಿತ್ತು. ಆದ್ರೆ ಆ ಜವಾಬ್ದಾರಿ ತೆಗೆದುಕೊಳ್ಳಲು ನಿತೀಶ್ ಕುಮಾರ್ ನಿರಾಕರಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರನ್ನು INDIA ಒಕ್ಕೂಟ ಸಂಚಾಲಕರನ್ನಾ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
26 ಪಕ್ಷಗಳ ಮೈತ್ರಿಕೂಟ ಇದಾಗಿದ್ದು, ಇಂದಿನ ಸಸಭೆಗೆ ಮಮತಾ ಬ್ಯಾನರ್ಜಿ ಮತ್ತು ಉದ್ಧವ್ ಠಾಕ್ರೆ ಗೈರು ಹಾಜರಾಗಿದ್ದರು. 14 ಪಕ್ಷಗಳ ನಾಯಕರು ಮಾತ್ರ ಹಾಜರಿದ್ದರು. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸೀತಾರಾಂ ಯೆಚೂರಿ, ಡಿಎಂಕೆ ನಾಯಕ ಸ್ಟಾಲಿನ್ ಮುಂತಾದವರು ವರ್ಚುಯಲ್ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ಸಂಚಾಲಕರ ಆಯ್ಕೆ ಬಗ್ಗೆ ಚರ್ಚೆ ಮಾಡಲಾಯಿತು. ಇನ್ನೂ ಕೂಡಾ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆದಿಲ್ಲ. ಆದಷ್ಟು ಬೇಗ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಳಿಸಿ ಒಟ್ಟಾಗಿ ರ್ಯಾಲಿ, ಪ್ರಚಾರ ಶುರು ಮಾಡಬೇಕೆಂದು ತೀರ್ಮಾನ ಮಾಡಲಾಗಿದೆ.