Politics

ಕೈ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್‌

ಕಾಂಗ್ರೆಸ್‌ನ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ದೃಢ ಆಗಿದೆ. ರಾಜ್ಯಸಭಾ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ರಾಮನಗರದ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ನಾಲ್ಕು ದಿನಗಳ ಹಿಂದೆ ಮೇಕೆದಾಟು ಪಾದಯಾತ್ರೆಗೆ ಅಧಿಕೃತ ಚಾಲನೆ ನೀಡಲಾಗಿತ್ತು. ಆ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಭಾಗವಹಿಸಿದ್ದರು. ಈಗ ಖರ್ಗೆ ಅವರಿಗೆ ಸೋಂಕು ತಗುಲಿದೆ.

ಖರ್ಗೆ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

 

Share Post