Politics

ವಿವಿಧ ಕ್ಷೇತ್ರದ ಸಾಧಕಿಯರನ್ನು ಸನ್ಮಾನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು; ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ‌ ಮಹಿಳೆಯರು, ಉತ್ತಮ ಸಾಧನೆ ಮಾಡಿರುವ ಸ್ತ್ರೀ ಶಕ್ತಿ ಸಂಘಟನೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದರು‌.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿರುವ ಬಾಲಭವನದಲ್ಲಿ ಮಂಗಳವಾರ ನಡೆದ ‘ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ’ -2024 ಸಮಾರಂಭದಲ್ಲಿ ಕಲೆ, ಸಾಹಿತ್ಯ, ಕ್ರೀಡೆ, ಶಿಕ್ಷಣ, 26 ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ, ಸನ್ಮಾನಿಸಿದರು.

ಮೂರು ಸ್ತ್ರೀ ಶಕ್ತಿ ಗುಂಪುಗಳು ರಾಜ್ಯ ಮಟ್ಟದ ಪ್ರಶಸ್ತಿ ಪಡೆದರೆ, ನಾಲ್ಕು ಸ್ತ್ರೀ ಶಕ್ತಿ ಗುಂಪುಗಳು ಯಶೋಧರಮ್ಮ ದಾಸಪ್ಪ ವಿಭಾಗೀಯ ಮಟ್ಟದ ಪ್ರಶಸ್ತಿ ಪಡೆದವು. ಕಲಬುರಗಿಯ ಚಿಂಚೊಳ್ಳಿ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ, ಗದಗದ ಶ್ರೀ ಗೌರಿ ಸ್ತ್ರೀ ಶಕ್ತಿ ಒಕ್ಕೂಟ, ಚಿಕ್ಕಬಳ್ಳಾಪುರದ ಸ್ಫೂರ್ತಿ ಸ್ತ್ರೀ ಶಕ್ತಿ ಬ್ಯಾಂಕ್ ಅತ್ಯುತ್ತಮ ತಾಲ್ಲೂಕು ಒಕ್ಕೂಟ ಪ್ರಶಸ್ತಿಗೆ ಭಾಜನರಾದವು.

ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿ,ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪದ್ಮಾವತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪುಷ್ಪಲತಾ.ಎಚ್. ಉಪಸ್ಥಿತರಿದ್ದರು.

Share Post