NationalPolitics

ಎಂಎಲ್‌ಸಿ ಕವಿತಾ ಹೇಳಿಕೆ ವಿವಾದ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

ಹೈದರಾಬಾದ್‌; ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಯ ಮತದಾನ ನಡೆಯುತ್ತಿದೆ. ರಾಜಕಾರಣಿಗಳು, ಗಣ್ಯರು ಕೂಡಾ ಮತ ಚಲಾವಣೆ ಮಾಡುತ್ತಿದ್ದಾರೆ. ಇನ್ನು ಇದೇ ವೇಳೆ ಬಿಆರ್‌ಎಸ್‌ ನಾಯಕಿ ಹಾಗೂ ಎಂಎಲ್‌ಸಿ ಕವಿತಾ ಅವರು ಮತಕೇಂದ್ರದ ಹೊರಗೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಕವಿತಾ ವಿರುದ್ಧ ಕಾಂಗ್ರೆಸ್‌ ನಾಯಕರು ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ.

ಇಂದು ಬೆಳಗ್ಗೆ ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ಡಿ ಎವಿ ಶಾಲೆಯ ಮತಗಟ್ಟೆಯಲ್ಲಿ ಎಂಎಲ್‌ಸಿ ಕವಿತಾ ಮತದಾನದ ಹಕ್ಕನ್ನು ಚಲಾಯಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್ ಸಿ ಕವಿತಾ ಬಿಆರ್ ಎಸ್ ಪಕ್ಷಕ್ಕೆ ಮತ ಹಾಕುವಂತೆ ಮತದಾರರಲ್ಲಿ ಮನವಿ ಮಾಡಿದರು. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದಿರುವ ಕಾಂಗ್ರೆಸ್‌,  ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿಕಾಸ್ ರಾಜ್ ಅವರಿಗೆ ದೂರು ನೀಡಿದೆ.

ಕವಿತಾ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಟಿಪಿಸಿಸಿ ಉಪಾಧ್ಯಕ್ಷ ನಿರಂಜನ್ ಅವರು ಸಿಇಸಿ ವಿಕಾಸ್ ರಾಜ್ ಅವರಿಗೆ ದೂರು ನೀಡಿದ್ದು, ಕವಿತಾ ಅವರ ಹೇಳಿಕೆಗಳ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಆದರೆ, ಕವಿತಾ ಅವರ ಹೇಳಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪಕ್ಷ ನೀಡಿದ ದೂರಿಗೆ ಬಿಆರ್‌ಎಸ್ ಅಧ್ಯಕ್ಷ ಕೆಟಿಆರ್ ಪ್ರತಿಕ್ರಿಯಿಸಿದ್ದಾರೆ. ಕವಿತಾ ಏನು ಹೇಳಿದ್ದಾರೆ, ಕಾಂಗ್ರೆಸ್ ಪಕ್ಷದವರು ಏನು ದೂರಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದಿದ್ದಾರೆ.

 

Share Post