NationalPolitics

ಪ್ರಧಾನಿ ಮೋದಿ ಡಿಸೆಂಬರ್‌ನಲ್ಲಿ ವಾರಾಣಸಿ ಭೇಟಿ

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿಯವರು ಡಿಸೆಂಬರ್‌ ತಿಂಗಳಲ್ಲಿ ಮೂರು ದಿನಗಳ ಕಾಲ ವಾರಾಣಸಿ ಪ್ರವಾಸ ಕೈಗೊಂಡಿದ್ದಾರೆ. ಡಿಸೆಂಬರ್‌ ೧೩ರಂದು ವಾರಾಣಸಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿಯವರು ಡಿಸೆಂಬರ್‌ ೧೫ರವರೆಗೆ ಡಜನ್‌ಗೂ ಹೆಚ್ಚು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಭಕ್ತರೊಂದಿಗೆ ಸಂವಾದ, ರೈತರೊಂದಿಗೆ ಸಂವಾದ ಕಾರ್ಯಕ್ರಮಗಳಲ್ಲಿ ಮೋದಿ ಭಾಗವಹಿಸಲಿದ್ದಾರೆ. ಇದಲ್ಲದೆ, ಶೂನ್ಯ ಬಜೆಟ್‌ ಕೃಷಿ ಕುರಿತ ಕಾರ್ಯಾಗಾರ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲೂ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇದರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಶಹಾಪುರದ ಜೈವಿಕ ಅನಿಲ ಸ್ಥಾವರಕ್ಕೂ ಪ್ರಧಾನಿ ಭೇಟಿ ನೀಡಲಿದ್ದು, ಪ್ರಧಾನಿ ಭೇಟಿ ನೀಡುವ ಕಡೆಯಲ್ಲೆಲ್ಲಾ ಸೂಕ್ತ ಭದ್ರತಾ ಕ್ರಮ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

Share Post