ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಿಲೀಫ್; ಸುಪ್ರೀಂ ಕೋರ್ಟ್‌ಗೆ ಡಿಕೆಶಿ ಸಾಷ್ಟಾಂಗ ನಮಸ್ಕಾರ
ನವದೆಹಲಿ; ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಕೇಸ್‌ನಲ್ಲಿ ಶಿವಕುಮಾರ್ ನಿರಾಳರಾಗಿದ್ಧಾರೆ. ವಿಚಾರಣೆ ನಡೆಸಿದ ಕೋರ್ಟ್ ಈ ಕೇಸ್‌ನ್ನು ರದ್ದು ಮಾಡಿ ಮಹತ್ವದ ಆದೇಶ ಹೊರಡಿಸಿದೆ.
ಇದನ್ನೂ ಓದಿ; ಕತ್ತಿಹಿಡಿದು ಮಾಜಿ ಮೇಯರ್ ಪುತ್ರನ ಗೂಂಡಾ ವರ್ತನೆ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ!
PML ಕಾಯಿದೆಯ ಅಡಿಯಲ್ಲಿ ಹಾಕಿದ್ದ ಕೇಸ್;
PML ಕಾಯಿದೆಯ ಅಡಿಯಲ್ಲಿ ಹಾಕಿದ್ದ ಕೇಸ್; ಅಕ್ರಮ ಹಣದ ವರ್ಗಾವಣೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಕೇಸ್ ದಾಖಲು ಮಾಡಿತ್ತು. PML ಕಾಯಿದೆಯ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಈ ಕೇಸ್ ಹಾಕಿತ್ತು. ಆದ್ರೆ ಸುಪ್ರೀಂ ಕೋರ್ಟ್ ಈ ಕೇಸ್ ಅನ್ನು ರದ್ದು ಮಾಡಿದೆ. ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನೆ ಮಾಡಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್, ಡಿ.ಕೆ.ಶಿವಕುಮಾರ್ ಅವರ ಪರ ವಕೀಲ ಮಾಡಿದ ವಾದವನ್ನು ಪುರಸ್ಕರಿಸಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯದ ವಿಚಾರಣೆಯನ್ನು ರದ್ದು ಮಾಡಲಾಗಿದೆ.
ಇದನ್ನೂ ಓದಿ; ಭಾರತ ದೇಶವಲ್ಲ, ಮೂರ್ಖರಿಗೆ ಮಾತ್ರ ಜೈ ಶ್ರೀರಾಮ್ ಘೋಷಣೆ; ವಿವಾದ ಸೃಷ್ಟಿಸಿದ ಎ.ರಾಜಾ
2018ರಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಸ್ ದಾಖಲಿಸಲಾಗಿತ್ತು;
2018ರಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಸ್ ದಾಖಲಿಸಲಾಗಿತ್ತು; ಜಾರಿ ನಿರ್ದೇಶನಾಲಯ ಅಂದರೆ ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ವಿರುದ್ಧ 2018ರಲ್ಲಿ ಕೇಸ್ ದಾಖಲು ಮಾಡಿದ್ದರು. ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿ ಈ ಕೇಸ್ ದಾಖಲು ಮಾಡಿಕೊಳ್ಳಲಾಗಿತ್ತು. ಆದ್ರೆ ಈ ಈ ಅಪರಾಧಗಳು ಆದಾಯ ತೆರಿಗೆ ಕಾಯಿದೆಯ ವೇಳಾಪಟ್ಟಿಯ ಭಾಗವಾಗಿಲ್ಲ. ಈ ಕಾರಣವನ್ನು ನೀಡಿರುವ ಸುಪ್ರೀಂ ಕೋರ್ಟ್, ಕರ್ನಾಟಕ ಹೈ ಕೋರ್ಟಿನ ತೀರ್ಪನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಅಂದರೆ ಇಡಿ ಪಿತೂರಿ ಮಾಡಿದ ಆರೋಪ ಹೊರಿಸಿತ್ತು. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಪಿಎಂಎಲ್ ಕಾಯಿದೆಯ ಅಡಿ ಪ್ರಕರಣ ದಾಖಲಿಸಿತ್ತು. ಈ ಬಗ್ಗೆ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಜಸ್ಟೀಸ್ ಸೂರ್ಯಕಾಂತ್ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಡಿ.ಕೆ.ಶಿವಕುಮಾರ್ ಪರ ವಕೀಲರು ಮಂಡಿಸಿದ ವಾದಕ್ಕೆ ಅಸ್ತು ಎಂದು ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ. PML ಕಾಯಿದೆಯ ಅಡಿಯ ಎಲ್ಲಾ ಪ್ರಕ್ರಿಯೆಗಳನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಇದನ್ನೂ ಓದಿ; ಪಾಕಿಸ್ತಾನ ಮಹಿಳೆ ಸೀಮಾ ಹೈದರ್ ವಿರುದ್ಧ 3 ಕೋಟಿ ಮಾನನಷ್ಟ ಮೊಕದ್ದಮೆ
ಹೈಕೋರ್ಟ್ ನೀಡಿದ್ದ ತೀರ್ಪಿನಲ್ಲೇನಿತ್ತು?;
ಹೈಕೋರ್ಟ್ ನೀಡಿದ್ದ ತೀರ್ಪಿನಲ್ಲೇನಿತ್ತು?; ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ, ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ಸಂಬಂಧ 2019ರ ಆಗಸ್ಟ್ನಲ್ಲಿ ಕರ್ನಾಟಕ ರಾಜ್ಯ ಹೈಕೋರ್ಟ್ ತೀರ್ಪು ನೀಡಿ ಆದೇಶ ಹೊರಡಿಸಿತ್ತು. ಇದರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಾಗಿರುವ 120B (ಕ್ರಿಮಿನಲ್ ಪಿತೂರಿ) ಪ್ರಕರಣ ಪಿತೂರಿಯ ಭಾಗವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿತ್ತು. ಇದನ್ನು ಪ್ರಶ್ನಸಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾ. ಸೂರ್ಯಕಾಂತ್ ಪೀಠ, ಈ ಕೇಸ್ ಕ್ರಿಮಿನಲ್ ಪಿತೂರಿಯ (120B) ಭಾಗವಾಗಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಅಕ್ರಮ ಹಣ ವರ್ಗಾವಣೆ ಕೇಸ್ ಅಡಿಯಲ್ಲಿ ಬರುವುದಿಲ್ಲ. ಹೈಕೋರ್ಟ್ ಆದೇಶವನ್ನು ರದ್ದುಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಪ್ರಕ್ರಿಯೆ ರದ್ದುಗೊಳಿಸಲಾಗಿದೆ ಎಂದು ಆದೇಶದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿದೆ.
ಇದನ್ನೂ ಓದಿ; 2022ರಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ಅರೆಸ್ಟ್; ಸೇಡಿನ ರಾಜಕಾರಣ ಆರೋಪ!