Politics

ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ನವೀನ್‌ ಜಯಭೇರಿ

ಚಿತ್ರದುರ್ಗ: ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 300 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ನವೀನ್‌ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಬಿ.ಸೋಮಶೇಖರ್‌ ಸೋಲನನ್ನನುಭವಿಸಿದ್ದಾರೆ. ಬಿಜೆಪಿ ವರಿಷ್ಠರು ವಿಶ್ವಾಸವಿಟ್ಟು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನೀಡಿದ ಅವಕಾಶವನ್ನು ಕೆ.ಎಸ್.ನವೀನ್‌ ಉಳಿಸಿಕೊಂಡಿದ್ದಾರೆ. ಕಾಂಗ್ರೆಸ್‌ ವಿರುದ್ದ 300 ಮತಗಳ ಅಂತರದಿಂದ ನವೀನ್‌ ಜಯಭೇರಿ ಸಾಧಿಸಿದ್ದಾರೆ. ಬೆಂ.ನಗರ, ಕೊಡಗು, ಚಿತ್ರದುರ್ಗದಲ್ಲಿ ಬಿಜೆಪಿ ಸ್ಥಾನ ಗಿಟ್ಟಿಸಿಕೊಂಡಿದೆ. ನವೀನ್‌ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.

Share Post