NationalPolitics

ದೇಶ ವಿಭಜನೆಯ ಮಾತು ಯಾರೂ ಆಡಬಾರದು; ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ನವದೆಹಲಿ; ದೇಶ ವಿಭಜನೆಯ ಮಾತು ಯಾರೇ ಆಡಿದರೂ ಅದನ್ನು ಸಹಿಸೋದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪಿಯೂಷ್ ಗೋಯಲ್ ಅವರು ನಿನ್ನೆ ಸಂಸದ ಡಿ.ಕೆ.ಸುರೇಶ್‌ ನೀಡಿರುವ ಹೇಳಿಕೆಯನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರಿಸಿ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ದೇಶದ ಒಡೆಯುವ ಬಗ್ಗೆ ಯಾರೂ ಮಾತನಾಡಬಾರದು. ಅದನ್ನು ನಾವು ಸಹಿಸುವುದಿಲ್ಲ ಎಂದು ಹೇಳಿದರು.

ನಿನ್ನೆ ಕೇಂದ್ರ ಬಜೆಟ್ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯಿಸಿದ್ದ ಸಂಸದ ಡಿಕೆ ಸುರೇಶ್, ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಅನ್ಯಾಯ ಹೀಗೆಯೇ ಮುಂದುವರೆದರೆ ನಾವು ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಹೇಳಿದ್ದರು. ಡಿ.ಕೆ.ಶಿವಕುಮಾರ್‌ ಅವರ ಈ ಹೇಳಿಕೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ಸೇರಿದಂತೆ ಹಲವು ಪಕ್ಷಗಳ ನಾಯಕರು ಡಿ.ಕೆ.ಸುರೇಶ್‌ ಕ್ಷಮೆಯಾಚಿಸಬೇಕೆ ಎಂದು ಆಗ್ರಹಿಸುತ್ತಿದ್ದಾರೆ. ಈ ನಡುವೆ ಈ ವಿಚಾರ ರಾಜ್ಯಸಭೆಯಲ್ಲೂ ಪ್ರಸ್ತಾಪವಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಸುರೇಶ್‌ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಹೀಗಾಗಿ ಯಾರೇ ಆದರೂ ದೇಶ ಒಡೆಯುವ ಮಾತನ್ನಾಡಬಾರದು ಎಂದಿದ್ದಾರೆ.

Share Post